Home / Uncategorized / ಪ್ರತಿಭಟನೆಗೆ ಹೋದ್ರೆ ಸಾರಿಗೆ ಇಲಾಖೆ ಬೇರೆ ವ್ಯವಸ್ಥೆ ಮಾಡಲಿದೆ – ಬಸ್‍ಗೆ ಹಾನಿ ಮಾಡಿದ್ರೂ ಕಠಿಣ ಕ್ರಮ:ರವಿ ಕುಮಾರ್ ಸ್ಪಷ್ಟನೆ

ಪ್ರತಿಭಟನೆಗೆ ಹೋದ್ರೆ ಸಾರಿಗೆ ಇಲಾಖೆ ಬೇರೆ ವ್ಯವಸ್ಥೆ ಮಾಡಲಿದೆ – ಬಸ್‍ಗೆ ಹಾನಿ ಮಾಡಿದ್ರೂ ಕಠಿಣ ಕ್ರಮ:ರವಿ ಕುಮಾರ್ ಸ್ಪಷ್ಟನೆ

Spread the love

ಬೆಂಗಳೂರು: ಸಾರಿಗೆ ನೌಕರರು ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಹೋಗಬಾರದು ಎಂದು ಮನವಿ ಮಾಡುತ್ತೇವೆ. 9 ಬೇಡಿಕೆಗಳಲ್ಲಿ ಒಂದು ಬೇಡಿಕೆ ಬಿಟ್ಟು ಎಲ್ಲಾ ಈಡೇರಿಸಿದ್ದೇವೆ ಎಂದು ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.

ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ತುರ್ತು ಸಭೆ ಕರೆದ ಸಿಎಂ ಬಿಎಸ್ ಯಡಿಯೂರಪ್ಪ,
ನಾಲ್ಕು ನಿಗಮಗಳ ಎಂಡಿಗಳ ಜೊತೆ ಕೃಷ್ಣಾದಲ್ಲಿ ಸಭೆ ನಡೆಸಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮುಂದಿನ ನಿರ್ಧಾರದ ಬಗ್ಗೆ ಚರ್ಚೆ ಮಾಡಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಸಾರಿಗೆ ಇಲಾಖೆ ಎಸಿಎಸ್ ಅಂಜುಂ ಪರ್ವೇಜ್, ಕೆಎಸ್‍ಆರ್‍ಟಿಸಿ ಎಂಡಿ ಶಿವಯೋಗಿ ಕಳಸದ್, ಬಿಎಂಟಿಸಿ ಎಂಡಿ ಶಿಖಾ, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

 

ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ 6ನೇ ವೇತನ ಆಯೋಗ ಶಿಫಾರಸ್ಸು ಜಾರಿ ಮಾಡಲು ಆಗಲ್ಲ. ಶೇ.8 ವೇತನ ಹೆಚ್ಚಳ ಮಾಡುತ್ತೇವೆ. ಚುನಾವಣಾ ಆಯೋಗ ಅನುಮತಿ ಕೊಡಬೇಕು. ಆಯೋಗದ ಅನುಮತಿಯನ್ನು ಕೇಳಿದ್ದೇವೆ. ಚುನಾವಣಾ ನೀತಿ ಸಂಹಿತೆ ಇರುವ ಕಾರಣ ಸಂಬಳ ಹೆಚ್ಚಳ ಮಾಡಲು ಆಗುತ್ತಿಲ್ಲ. ಪ್ರತಿಭಟನೆಗೆ ಹೋಗಬಾರದು, ಮನವಿ ಮಾಡಿದ್ದೇವೆ ಎಂದರು.

ಪ್ರತಿಭಟನೆಗೆ ಹೋದರೆ ಸಾರಿಗೆ ಇಲಾಖೆ ಬೇರೆ ವ್ಯವಸ್ಥೆ ಮಾಡಲಿದೆ. ಸಾರಿಗೆ ಪ್ರತಿಭಟನೆಯನ್ನ ಕಠಿಣವಾಗಿ ಡೀಲ್ ಮಾಡುತ್ತೇವೆ. ಈ ಕುರಿತಾಗಿ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಮಾತುಕತೆಗೆ ಹೋಗುವ ಪ್ರಶ್ನೆಯೇ ಇಲ್ಲ. ಬಸ್ಸಿಗೆ ಹಾನಿ ಮಾಡಿದ್ರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಎಸ್ಮಾ ಜಾರಿ ಬಗ್ಗೆ ಚರ್ಚೆ ಆಗುತ್ತಿದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.


Spread the love

About Laxminews 24x7

Check Also

ಮಹಿಳೆ ಮೇಲೆ ಹಲ್ಲೆ ಪ್ರಕರಣ ; ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಸಿಹಿ ತಿನ್ನಿಸಿ ಸ್ವಾಗತ

Spread the loveಬೆಳಗಾವಿ : ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿ ಹೊರವಲಯದ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ