Breaking News

ಬೆಳಗಾವಿ ಉಪಚುನಾವಣೆ ಅಖಾಡಕ್ಕೆ ಸಿಎಂ ಯಡಿಯೂರಪ್ಪ: ಮಂಗಲಾ ಅಂಗಡಿ ಪರ ಮತಯಾಚನೆ

Spread the love

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದೆ. ಪ್ರಮುಖ ಪಕ್ಷಗಳ ನಾಯಕರು ಕ್ಷೇತ್ರಗಳಿಗೆ ತೆರಳಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ್ ಅಂಗಡಿ ಪರ ಮುಖ್ಯಮಂತ್ರು ಬಿ.ಎಸ್.ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ.

ಸಿಎಂ ಯಡಿಯೂರಪ್ಪ ಇಂದು ಕೆಂಪೇಗೌಡ ಏರ್ ಪೋರ್ಟ್ ಮೂಲಕ ಹುಬ್ಬಳಿಗೆ ಪ್ರಯಾಣ ಬೆಳೆಸಿದರು. ಹುಬ್ಬಳ್ಳಿಯಿಂದ ರಸ್ತೆ ಮಾರ್ಗದ ಮೂಲಕ ಬೆಳಗಾವಿಗೆ ಪ್ರಯಾಣ ಮಾಡಲಿದ್ದು, ಇಂದು ಬೆಳಗಾವಿಯಲ್ಲೇ ಇಂದು ವಾಸ್ತವ್ಯ ಹೂಡಲಿದ್ದಾರೆ.

ನಾಳೆ ರಾಮದುರ್ಗ, ಸವದತ್ತಿ ಕ್ಷೇತ್ರದಲ್ಲಿ ಸಿಎಂ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದು, ಕಾರ್ಯಕ್ರಮದ ಬಳಿಕ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವ ಕಲ್ಯಾಣ ವಿಧಾನ ಸಭೆ ಕ್ಷೇತ್ರಗಳಿಗೆ ಎ.17ರಂದು ಉಪ ಚುನಾವಣೆ ನಡೆಯಲಿದೆ. ಮೇ.2ರಂದು ಮತ ಎಣಿಕೆ ನಡೆಯಲಿದೆ


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ