ಪ್ರಯಾಗ್‍ರಾಜ್, -ಉತ್ತರಪ್ರದೇಶದ ಆಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ನಿರ್ಮಾಣ ಭೂಮಿ ಪೂಜೆಗೆ ಈಗ ಮತ್ತೊಂದು ವಿಘ್ನ ಎದುರಾಗಿದೆ.
ಕೊರೊನಾ ವೈರಸ್ ಸೋಂಕು ಹಾವಳಿ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ನಡೆಸಲು ಉದ್ದೇಶಿಸಲಾಗಿರುವ ರಾಮಮಂದಿರ ಭೂಮಿ ಪೂಜೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಅಲಹಾಬಾದ್ ಹೈಕೋರ್ಟ್‍ಗೆ ಅರ್ಜಿಯೊಂದನ್ನು ಸಲ್ಲಿಸಲಾಗಿದೆ.
ಅನ್‍ಲಾಕ್ 2.0 ಉಲ್ಲಂಘನೆ ಕಾರಣವನ್ನು ಮುಂದೊಡ್ಡಿ ರಾಮಮಂದಿರ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮಕ್ಕೆ ತಡೆಯಾಜ್ಞೆ ನೀಡುವಂತೆ ದೆಹಲಿ ಮೂಲದ ಹಿರಿಯ ವಕೀಲ ಸಾಕೇಶ್ ಗೋಖಲೆ ಕೋರ್ಟ್‍ಗೆ ಮನವಿ ಸಲ್ಲಿಸಿದ್ದಾರೆ.
ಆಯೋಧ್ಯೆಯಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಜಿಸಿರುವ ಮಂದಿರ ನಿರ್ಮಾಣ ಭೂಮಿ ಪೂಜೆಗೆ ಅತಿಗಣ್ಯ ವ್ಯಕ್ತಿಗಳೂ ಸೇರಿದಂತೆ 200ಕ್ಕೂ ಹೆಚ್ಚು ಜನರು ಸೇರಲಿದ್ದು, ಇದು ಈಗ ರಿಯಲ್ಲಿರುವ ಅನ್‍ಲಾಕ್ 2.0 ಮಾರ್ಗಸೂಚಿಗಳ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಆದಕಾರಣ ಈ ಕಾರ್ಯಕ್ರಮಕ್ಕೆ ತಡೆಯಾಜ್ಞೆ ನೀಡುವಂತೆ ಅವರು ತಮ್ಈ ಧಾರ್ಮಿಕ ಕಾರ್ಯಕ್ರಮದಿಂದ ಕೊರೊನಾ ಸೋಂಕು ವ್ಯಾಪಿಸುವ ಆತಂಕ ಹೆಚ್ಚಾಗಿದೆ. ಜನರ ಅರೋಗ್ಯದ ಹಿತದೃಷ್ಟಿಯಿಂದ ಈ ಕಾರ್ಯಕ್ರಮಕ್ಕೆ ತಡೆ ನೀಡುವುದು ಸೂಕ್ತ ಎಂದು ಸಾಕೇಶ್ ಗೋಖಲೆ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ