Breaking News

7 ಜಿಲ್ಲೆಗಳಲ್ಲಿ ಶತಕ ದಾಟಿದ ಕೊರೊನಾ ಅಬ್ಬರ

Spread the love

ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಶತಕ ದಾಟಿದ್ದು, ರಾಜ್ಯದ ಇತರೆ ಜಿಲ್ಲೆಗಳಲ್ಲೂ ದಿನೇದಿನೆ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 4266 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಎಂದಿನಂತೆ ಅಪಾಯದ ಕರೆಗಂಟೆ ಬಾರಿಸುತ್ತಿದೆ.

ಕಲಬುರಗಿಯಲ್ಲಿ 261, ಮೈಸೂರಿನಲ್ಲಿ 237, ತುಮಕೂರು 157, ಮಂಡ್ಯ 102, ಹಾಸನ 110 ಮತ್ತು ಬೀದರ್ ನಲ್ಲಿ 167 ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರಿನಲ್ಲಿ ಒಂದೇ ದಿನ ಅತೀ ಹೆಚ್ಚು 26 ಮಂದಿ ಸೋಂಕಿಗೆ ಬಲಿಯಾಗಿದ್ದರೆ, ಧಾರವಾಡ ಮತ್ತು ಮೈಸೂರಿನಲ್ಲಿ ತಲಾ 3, ಕಲಬುರಗಿಯಲ್ಲಿ 2 ಮತ್ತು ಮಂಡ್ಯದಲ್ಲಿ ಒಬ್ಬರು ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Spread the loveಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಪೆನ್‌ಡ್ರೈವ್‌ ಹಂಚಿಕೆ ಸಂಬಂಧ ಎಸ್‌ಐಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ