Breaking News

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ರಮೇಶ್ ಜಾರಕಿಹೊಳಿ ಕೆಲ ದಿನ ಹೋಂ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ

Spread the love

ಬೆಳಗಾವಿ : ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ರಮೇಶ್ ಜಾರಕಿಹೊಳಿ ಡಿಸ್ಚಾರ್ಜ್, ಇನ್ನು ಕೆಲ ದಿನ ಹೋಂ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಗೋಕಾಕ ತಾಲ್ಲೂಕು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಏಪ್ರಿಲ್ 4ರಂದು ರಾತ್ರಿ 10.30ರ ಸುಮಾರಿಗೆ ತೀವ್ರ ಉಸಿರಾಟದ ಸಮಸ್ಯೆ ಎದುರಾದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ರಮೇಶ್ ಜಾರಕಿಹೊಳಿ ಬಿಪಿ, ಶುಗರ್ ಜಾಸ್ತಿಯಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರ ಆರೋಗ್ಯ ಪರಿಸ್ಥಿತಿ ಸುಧಾರಿಸಿದ್ದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಏಪ್ರಿಲ್ 1ರಂದು ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಮನೆಯಲ್ಲೇ ಕ್ವಾರಂಟೈನ್ ಆಗಿದ್ದ ಅವರಿಗೆ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದ್ದರಿಂದ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು ಎಂದು ಗೋಕಾಕ ತಾಲೂಕು ಆಸ್ಪತ್ರೆ ವೈದ್ಯರು ಸ್ಪಷ್ಟನೆ ನೀಡಿದ್ದರು.

 

 


Spread the love

About Laxminews 24x7

Check Also

ಅಲಿ ಖಮೇನಿ ಪೋಸ್ಟರ್ ವಿರುದ್ಧ ಶ್ರೀರಾಮ ಸೇನೆಯಿಂದ ಶಿವಾಜಿ ಹಾಗೂ ಮೋದಿ ಬ್ಯಾನರ್ ಅಭಿಯಾನ

Spread the loveಬೆಳಗಾವಿ : ನಗರದಲ್ಲಿ ಅಳವಡಿಸಿರುವ ಇರಾನ್ ದೇಶದ ಅಲಿ ಖಮೇನಿ ಪೋಸ್ಟರ್ ವಿರುದ್ಧ ಶ್ರೀರಾಮ ಸೇನೆಯಿಂದ ಆಫ್ಜಲ್‌ಖಾನ್‌ನ ವಧೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ