Breaking News

ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಜೆಡಿಎಸ್ ಮುಖಂಡರು

Spread the love

ಬೆಳಗಾವಿ : ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಜೆಡಿಎಸ್ ಜಿಲ್ಲಾಧ್ಯಕ್ಷ ತೀರ್ಥಹಳ್ಳಿಯ ಮಂಜುನಾಥಗೌಡ ಅವರು ತಮ್ಮ ಬೆಂಬಲಿಗರ ಜತೆ ಕಾಂಗ್ರೆಸ್ ಸೇರ್ಪಡೆಯಾದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಜಂಜುನಾಥ್ ಗೌಡ ಹಾಗೂ ಬೆಂಬಲಿಗರನ್ನು ಕಾಂಗ್ರೆಸ್ಸಿಗೆ ಬರಮಾಡಿಕೊಳ್ಳಲಾಯಿತು. ಕಾಂಗ್ರೆಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಸುಂದರೇಶ್ ಮತ್ತಿತರರು ಹಾಜರಿದ್ದರು.

ಇದೇ ವೇಳೆ ಬೆಳಗಾವಿ ಮತ್ತು ಬಾಗಲಕೋಟೆಯ ಅನ್ಯಪಕ್ಷಗಳ ಮಹಿಳಾ ಮುಖಂಡರು ಕೂಡ ತಮ್ಮ ಬೆಂಬಲಿಗರ ಜತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವೀಣಾ ಕಾಶಪ್ಪನವರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.


Spread the love

About Laxminews 24x7

Check Also

ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ 1.50 ಕೋಟಿ ರೂಪಾಯಿ ವೆಚ್ಚದ ಕಟ್ಟಡದ ಕಾಮಗಾರಿಗೆ ಚಾಲನೆ

Spread the love ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ 1.50 ಕೋಟಿ ರೂಪಾಯಿ ವೆಚ್ಚದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ