Breaking News

ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್!

Spread the love

ಕೋಲಾರ: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಕೋಲಾರದ ಕುರುಬರ ಪೇಟೆ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ.

ಮದುವೆ ವಿಚಾರವಾಗಿ ವಿವಾದಕ್ಕೀಡಾಗಿದ್ದ ಇವರು ಸದ್ಯ ಮನನೊಂದು ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಇವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೈತ್ರಾ ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವರೊಂದಿಗೆ ಮದುವೆಯಾಗಿದ್ದರು.

ಮದುವೆ ದಿನವೆ ವಿವಾದಕ್ಕೀಡಾಗಿದ್ದ ಚೈತ್ರಾ ಪೊಲೀಸ್ ಠಾಣೆಯ ಮಟ್ಟಿಲೇರಿದ್ದರು. ಮದುವೆ ವಿಚಾರವಾಗಿ ಮನನೊಂದ ನಟಿ, ಕವಯಿತ್ರಿ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಚೈತ್ರಾ ಕೋಟೂರ್ ರಿಯಲ್​ ಎಸ್ಟೇಟ್​ ನಲ್ಲಿ ತೊಡಗಿಕೊಂಡಿದ್ದ ನಾಗಾರ್ಜುನ್​ ಎಂಬುವವರನ್ನು ಮಾ.28ರಂದು ಮದುವೆಯಾಗಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ