Breaking News

ಸರ್ಕಾರ ನಡೆಸುವುದು ನಮಗೆ ಗೊತ್ತಿದೆ: ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಸಿಎಂ

Spread the love

ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಖಾಸಗಿ ವಾಹನ ಕಾರ್ಯಾಚರಣೆ ನಡೆಸುತ್ತಿದ್ದು, ಸಾಕಷ್ಟು ಸರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಸುರಕ್ಷಿತ ಪ್ರಯಾಣದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಡೆಸುವುದು ನಮಗೆ ಗೊತ್ತಿದೆ. ನೀವು ಅದರ ಬಗ್ಗೆ ತಲೆ ಕೆಡಿಸಕೊಳ್ಳುವುದು ಬೇಡ. ಸರ್ಕಾರ ಹೇಗೆ ನಡೆಸಬೇಕು ನಮಗೆ ಗೊತ್ತಿದೆ. ಪ್ರಯಾಣಿಕರ ಜವಾಬ್ದಾರಿ ನಾವು ತೆಗೆದುಕೊಳ್ಳುತ್ತೇವೆ ಎಂದರು.

ನಾನು ಇವತ್ತು ಬೆಂಗಳೂರಿಗೆ ಹೋಗುತ್ತಿದ್ದೇನೆ, ಅಧಿಕಾರಿಗಳ‌ ಜೊತೆ ಸಭೆ ನಡೆಸುತ್ತೇನೆ. ಖಾಸಗಿ ವಾಹನಗಳ‌ ದುಪ್ಪಟ್ಟು ಹಣ ವಸೂಲಿ ಮಾಡುತ್ತಿಲ್ಲ, ನಾವು ನಿಗದಿ ಮಾಡಿದ ಹಣ ಮಾತ್ರ ವಸೂಲಿ ಮಾಡುತ್ತಿದ್ದಾರೆ. ಒಂದು ವೇಳೆ ದುಪ್ಪಟ್ಟು ಹಣ ವಸೂಲಿ‌ ಮಾಡಿದರೆ ಕ್ರಮ ಜರುಗಿಸುತ್ತೇವೆ. ವಿಶೇಷವಾದ ಸಂದರ್ಭದಲ್ಲಿ ಖಾಸಗಿ ವಾಹನ ಓಡಿಸಲಾಗುತ್ತಿದೆ.
ಪ್ರಯಾಣಿಕರು ಯಾವುದೇ ಆತಂಕ ಪಡುವುದು ಬೇಡ ಎಂದರುಮ

ಬೆಳಗಾವಿ ಲೋಕ ಸಭೆ ಉಪ ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು ಎರಡು ದಿನಗಳ ಕಾಲ ಬೆಳಗಾವಿಯಲ್ಲಿ ಇದ್ದೆ. ಅಲ್ಲಿರುವ ಎಲ್ಲಾ ವಾತಾವರಣ ಕೂಡ ನಮ್ಮ ಪರವಾಗಿದೆ‌. ಮಾಜಿ ಸಚಿವ ದಿ.ಸುರೇಶ ಅಂಗಡಿಯವರು ಗೆದ್ದ ಅಂತರದಲ್ಲಿ ಅಂಗಡಿಯವರ ಶ್ರೀಮತಿಯವರು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ