Breaking News
Home / ಜಿಲ್ಲೆ / ಬೆಳಗಾವಿ / ಸತೀಶ್ ಜಾರಕಿಹೊಳಿಯವರಿಗೆ ಡಿಎಸ್ಎಸ್ ಬೆಂಬಲ..!

ಸತೀಶ್ ಜಾರಕಿಹೊಳಿಯವರಿಗೆ ಡಿಎಸ್ಎಸ್ ಬೆಂಬಲ..!

Spread the love

ಕೇಂದ್ರ ಮತ್ತು ರಾಜ್ಯಗಳಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಶೋಷಿತ ಸಮಾಜಗಳು ಮತ್ತು ಕಡುಬಡವರ ವಿರೋಧಿಯಾಗಿದ್ದು, ಅದನ್ನು ಕಿತ್ತೊಗೆಯಲು ನಾವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮತ್ತು ಮುತ್ಸದ್ದಿ ಸತೀಶ ಜಾರಕಿಹೊಳಿ ಅವರನ್ನು ಬೆಂಬಲಿಸಲಿದ್ದೇವೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕರಾದ ಲಕ್ಷ್ಮಿನಾರಾಯಣ ನಾಗವಾರ ಹೇಳಿದರು.

ಶುಕ್ರವಾರ ದಂದು ಬೆಳಗಾವಿಯ ಕಮ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೇಶದ ರೈತರು ಕಾರ್ಮಿಕರು ಹಿಂದುಳಿದ ವರ್ಗದವರು ದಲಿತರು ಹಾಗೂ ಅಲ್ಪಸಂಖ್ಯಾತರ ಬದುಕನ್ನು ವ್ಯವಸ್ಥಿತವಾಗಿ ನಾಶಮಾಡುವ ಪಿತೂರಿ ನಡೆದಿದೆ. ಪೆಟ್ರೋಲ್ ಡೀಸೆಲ್ ಆಹಾರಪದಾರ್ಥಗಳ ಬೆಲೆಏರಿಕೆಯಿಂದ ಜನಸಾಮಾನ್ಯರ ಬದುಕು ಯಾತನೆ ಯಲ್ಲಿದೆ.

ರಾಜ್ಯ ಬಿಜೆಪಿ ಸರ್ಕಾರ ಶೋಷಿತ ಸಮಾಜಗಳ ಕಡುವೈರಿ ಎಂಬುದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರು ಮಂಡಿಸಿರುವ ಬಜೆಟ್ ಸಾಕ್ಷಿಯಾಗಿದೆ. ಆರ್ಥಿಕವಾಗಿ ಸಾಮಾಜಿಕವಾಗಿ ಬಲಿಷ್ಠವಾಗಿರುವ ಸಮಾಜಗಳಿಗೆ ಕೇಳದಿದ್ದರೂ ತಲಾ 500 ಕೋಟಿ ರೂ ಅನುದಾನ ಘೋಷಿಸಲಾಗಿದೆ. ಆದರೆ ಬಹುಸಂಖ್ಯಾತ ವಾಗಿರುವ ಹಿಂದುಳಿದ ವರ್ಗದವರು ಪರಿಶಿಷ್ಟ ಜಾತಿ ವರ್ಗದವರಿಗೆ ಇದರ ಅರ್ಧದಷ್ಟು ಹಣ ನೀಡದೆ ತಾರತಮ್ಯ ಮಾಡಲಾಗಿದೆ. ಸಾಮಾಜಿಕ ನ್ಯಾಯವನ್ನು ಕೊಲ್ಲಲಾಗಿದೆ.ಆಟೋ ಚಾಲಕರು, ನಗರಗಳಲ್ಲಿ ದುಡಿಯುತ್ತಿರುವ ಶ್ರಮಜೀವಿಗಳು ಹಸಿವಿರಬಾರದು ಎಂಬ ಕಾರಣಕ್ಕೆ ಸ್ಥಾಪಿಸಲಾಗಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ವ್ಯವಸ್ಥಿತವಾಗಿ ಮುಚ್ಚುತ್ತಾ ಬಂದಿದ್ದಾರೆ ಸಮಾಜಗಳ ಬಿಪಿಎಲ್ ಕಾರ್ಡುಗಳನ್ನು ಕ್ಷುಲ್ಲಕ ನೆಪ ಹೇಳಿ ಕಿತ್ತುಕೊಳ್ಳುವ ಹುನ್ನಾರ ನಡೆಸಿದ್ದಾರೆ. ಅಲ್ಲದೆ ನೋಟು ಬಂದಿ, ಜಿಎಸ್ಟಿ ಮುಂತಾದ ಗದಾಪ್ರಹಾರ ದಲ್ಲಿ ರೈತರು ಸಣ್ಣಪುಟ್ಟ ಕೈಗಾರಿಕೋದ್ಯಮಿಗಳು ದಲಿತರು ಕಾರ್ಮಿಕರ ಬದುಕು, ಚಿಂತಾಜನಕ ಸ್ಥಿತಿಗೆ ಬಂದಿದೆ ಎಂದರು.

ಇನ್ನು ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಜನತೆಯ ನೆಮ್ಮದಿಯ ಬದುಕಿಗಾಗಿ ಕಾಂಗ್ರಸ್ ಪಕ್ಷವನ್ನು ಬೆಂಬಲಿಸುವುದು ಅನಿವಾರ್ಯವಾಗಿದೆ. ಹಾಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಎಲ್ಲ ವರ್ಗಗಳಿಗೆ ಪ್ರೀತಿಪಾತ್ರರಾದ ಸತೀಶ ಜಾರಕಿಹೊಳಿ ಅವರನ್ನು ಗೆಲ್ಲಿಸುವುದರ ಮೂಲಕ, ವಿರೋಧಿ ಬಿಜೆಪಿ ಹಠಾವೋ ಕಾರ್ಯಕ್ರಮಕ್ಕೆ ಕೈಜೋಡಿಸಬೇಕಾಗಿದೆ ಎಂದು ವಿನಂತಿಸುತ್ತೇವೆಂದರು.

ಈ ಸುದ್ದಿಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ಕಲ್ಲಪ್ಪ ಕಾಂಬಳೆ,ಗೌರಮ್ಮ ದೊಡಮನಿ,ಸೇರಿದಂತೆ ಇತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ