Breaking News

ಎಚ್.ಕೆ.ಪಾಟೀಲ್ ಮತ್ತು ಅಶೋಕ ಮಹದೇವಗೆ ಗೌರವ ಡಾಕ್ಟರೇಟ್

Spread the love

ಗದಗ : ಮಾಜಿ ಸಚಿವ, ಶಾಸಕ ಎಚ್.ಕೆ.ಪಾಟೀಲ್ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಅಶೋಕ ಮಹದೇವ ದಳವಾಯಿ ಅವರಿಗೆ ಇಲ್ಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಕಟಿಸಿದೆ.

ಸಾರ್ವಜನಿಕ ನೀತಿ ಮತ್ತು ಸಮಾಜ ಸೇವೆಗೆ ನೀಡಿದ ಗಮನಾರ್ಹ ಕೊಡುಗೆಯನ್ನು ಗುರುತಿಸಿ ಎಚ್.ಕೆ.ಪಾಟೀಲ್ ಅವರಿಗೆ ಹಾಗೂ ದೇಶದ ಗ್ರಾಮೀಣ ಮತ್ತು ಬುಡಕಟ್ಟು ಜನಾಂಗಗಳ ಪುನರ್ ನಿರ್ಮಾಣದಲ್ಲಿ ಸಲ್ಲಿಸಿರುವ ಮಹತ್ತರ ಸೇವೆಯನ್ನು ಪರಿಗಣಿಸಿ ಡಾ|ಅಶೋಕ ಮಹಾದೇವ ದಳವಾಯಿ ಅವರಿಗೆ ಡಾಕ್ಟರ್ ಆಫ್ ಲಿಟರೇಚರ್ ಗೌರವ ನೀಡಲು ನಿರ್ಧರಿಸಲಾಗಿದೆ. ಏ.10 ರಂದು ನಡೆಯಲಿರುವ ಪ್ರಥಮ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ಗ್ರಾವಿವಿ ಕುಲಪತಿ ಪ್ರೊ| ವಿಷ್ಣುಕಾಂತ ಎಸ್.ಚಟಪಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಇದಾಗಿದ್ದು, ಒಟ್ಟು 7 ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳ 250 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ವಿವರಿಸಿದರು.


Spread the love

About Laxminews 24x7

Check Also

ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ 1.50 ಕೋಟಿ ರೂಪಾಯಿ ವೆಚ್ಚದ ಕಟ್ಟಡದ ಕಾಮಗಾರಿಗೆ ಚಾಲನೆ

Spread the love ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ 1.50 ಕೋಟಿ ರೂಪಾಯಿ ವೆಚ್ಚದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ