Breaking News

ಕೊರೊನಾ ಕರ್ಫ್ಯೂ ಮಾರ್ಗಸೂಚಿ ಪ್ರಕಟ ನಾಳೆ ರಾತ್ರಿಯಿಂದ 10 ದಿನಗಳ ಕಾಲ ಕರ್ಫ್ಯೂ ಜಾರಿ

Spread the love

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಳೆಯಿಂದ 8 ಜಿಲ್ಲೆಗಳಲ್ಲಿ ಕೊರೊನಾ ಕರ್ಫ್ಯೂ ಜಾರಿಗೊಳಿಸಿದ್ದು, ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ನಾಳೆ ರಾತ್ರಿ 10ಗಂಟೆಯಿಂದ ಏಪ್ರಿಲ್ 20ರವರೆಗೆ ರಾತ್ರಿ ವೇಳೆ ಕೊರೊನಾ ಕರ್ಫ್ಯೂ ಜಾರಿಗೆ ಬರಲಿದ್ದು, ವೈದ್ಯಕೀಯ ಹಾಗೂ ತುರ್ತು ಸೇವೆಗೆ ಮಾತ್ರ ಅವಕಾಶ ನೀಡಲಾಗಿದೆ.ಉಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ.

ರಾತ್ರಿ 10ಗಂಟೆಯಿಂದ ಎಲ್ಲಾ ಅಂಗಡಿಗಳು, ಹೋಟೆಲ್, ಬಾರ್, ರೆಸ್ಟೋರೆಂಟ್, ಸೇರಿದಂತೆ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ. ಕಾರ್ಖಾನೆ, ಕಂಪನಿಗಳು, ಸಂಸ್ಥೆಗಳು ಕಾರ್ಯನಿರ್ವಹಿಸಲು, ನೈಟ್ ಶಿಫ್ಟ್ ಉದ್ಯೋಗಕ್ಕೆ ತೆರಳುವವರಿಗೆ ಅವಕಾಶವಿದ್ದು, ಹೋಂ ಡಿಲೆವರಿ, ಇ ಕಾಮರ್ಸ್ ವಾಹನಗಳಿಗೆ ಅನುಮತಿ ನೀಡಲಾಗುತ್ತಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ