Breaking News

ಪ್ರಹ್ಲಾದ್ ಜೋಶಿ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಸಾವು

Spread the love

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಹುಬ್ಬಳ್ಳಿಯ ಮನೆಯ ಮುಂದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

 

ಶ್ರೀದೇವಿ ಕಮ್ಮಾರ ಮೃತ ಮಹಿಳೆ. ಮನೆ ಬಿದ್ದ ಪರಿಣಾಮ ಪರಿಹಾರಕ್ಕೆ ಅಲೆದಾಡಿದ ಮಹಿಳೆ ಮನನೊಂದು ಏಪ್ರಿಲ್ 6ರಂದು ಸಚಿವರ ಹುಬ್ಬಳ್ಳಿ ಮಯೂರಿ ಎಸ್ಟೇಟ್ ನಲ್ಲಿರುವ ಮನೆಯ ಎದುರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದೇ ವೇಳೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಮೃತಪಟ್ಟಿದ್ದಾರೆ.

ಮನೆ ನಿರ್ಮಾಣದ ಬಗ್ಗೆ ಅಧಿಕಾರಿಗಳ ಬಳಿ ಅಲೆದಾಡಿ ಬೇಸತ್ತಿದ್ದ ಮಹಿಳೆ ವಿಷ ಸೇವಿಸಿದ್ದರು. ಅಲ್ಲದೇ ತನ್ನ ಸಾವಿನ ಬಗ್ಗೆ ಕೂಡ ಡೆತ್ ನೋಟ್ ಬರೆದಿಟ್ಟು ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ರು. ಘಟನೆಯ ನಂತರ ಮಹಿಳೆಯನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಈ ಕುರಿತು ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ