ಮುಧೋಳ(ಬಾಗಲಕೋಟೆ ಜಿಲ್ಲೆ): ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಮತ್ತೆ ಕೊರೊನಾ ಸೋಂಕು ತಗುಲಿದ್ದು, ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ಅವರು ಗುಣಮುಖರಾಗುತ್ತಿದ್ದು ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಯಾರೂ ಆತಂಕ ಪಡುವ ಅಗತ್ಯ ಇಲ್ಲ. ಅವರಿಗೆ ನಾಲ್ಕು ದಿನ ವಿಶ್ರಾಂತಿಯ ಅಗತ್ಯವಿದೆ’ ಎಂದು ಮಣಿಪಾಲ ಆಸ್ಪತ್ರೆ ಮುಖ್ಯಸ್ಥ ಡಾ.ಸುರ್ದಶನ ಬಲ್ಲಾಳ್ ತಿಳಿಸಿದ್ದಾರೆ.
ಕಳೆದ ವರ್ಷವೂ ಅವರಿಗೆ ಸೋಂಕು ತಗುಲಿತ್ತು, ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು.
Laxmi News 24×7