Breaking News
Home / ರಾಜ್ಯ / RSS ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೊನಾವೈರಸ್!

RSS ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೊನಾವೈರಸ್!

Spread the love

ನಾಗ್ಪುರ್, ಏಪ್ರಿಲ್ 10: ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ವೇಗ ಹೆಚ್ಚುತ್ತಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕೊವಿಡ್-19 ಸೋಂಕು ತಗುಲಿರುವು ಹಿನ್ನೆಲೆ ಮೋಹನ್ ಭಾಗವತ್ ಅವರನ್ನು ನಾಗ್ಪುರದಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ಅವರ ಜೊತೆಗೆ ಸಂಪರ್ಕಕ್ಕೆ ಬಂದಿದ್ದವರು ಸ್ವಯಂಪ್ರೇರಿತರಾಗಿ ಕೊರೊನಾವೈರಸ್ ಸೋಂಕಿನ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ.

ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆಗೆ ಕಡಿವಾಣವೇ ಇಲ್ಲದಂತಾಗಿದೆ. ರಾಜ್ಯದಲ್ಲಿ ಒಂದೇ ದಿನ 58993 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 45,391 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಂದೇ ದಿನ 301 ಮಂದಿ ಪ್ರಾಣ ಬಿಟ್ಟಿದ್ದಾರೆ. ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 32,88,540ಕ್ಕೆ ಏರಿಕೆಯಾಗಿದೆ. ಈವರೆಗೂ 26,95,148 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಟ್ಟು 57,329 ಮಂದಿ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ ರಾಜ್ಯದಲ್ಲಿ 5,34,603 ಸಕ್ರಿಯ ಪ್ರಕರಣಗಳಿವೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ