Breaking News

ಯಡಿಯೂರಪ್ಪ ಕುಳಿತಿರುವ ಹಡಗು ಮುಳುಗುತ್ತಿದೆ, ಯತ್ನಾಳ್ ಅದಕ್ಕೆ ಸಾಕ್ಷಿ : ಸಿದ್ದರಾಮಯ್ಯ

Spread the love

ಬೆಳಗಾವಿ, ಏ.10- ಸದ್ಯ ಮುಖ್ಯಮಂತ್ರಿ ಯಡಿಯೂರಪ್ಪ ಕುಳಿತಿರುವ ಹಡಗೇ ಈಗ ಮುಳುಗುತ್ತಿದೆ. ಇದಕ್ಕೆ ಅವರದ್ದೇ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರೆ ಸಾಕ್ಷಿ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಯಡಿಯೂರಪ್ಪ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯಅವರು, ಯಡಿಯೂರಪ್ಪ ಕುಳಿತಿರುವ ಹಡಗೇ ಮುಳುಗುತ್ತಿದೆ. ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಇದಕ್ಕೆ ಸಾಕ್ಷಿಯಾಗಿದ್ದಾರೆ ಎಂದು ಹೇಳಿದ್ದಾರೆ.

.ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಒಬ್ಬ ಬಿಜೆಪಿ ಹಿರಿಯ ಮುಖಂಡ. ಅವರು ಏನು ಹೇಳುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ಪ್ರಶ್ನಿಸಿದ ಸಿದ್ದರಾಮಯ್ಯ, ಬಸನಗೌಡ ಪಾಟೀಲ ಯತ್ನಾಳ್ ಅವರ ಮಾತು ಕೇಳಿದರೆ ಯಡಿಯೂರಪ್ಪ ಕುಳಿತಿರುವ ಹಡಗು ಮುಳುಗುತ್ತಿದೆ ಅಂತಾ ಅನಿಸುತ್ತೆ ಅಲ್ವಾ ಎಂದು ಪ್ರಶ್ನೆ ಮಾಡಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ