Breaking News

62.55 ಲಕ್ಷ ನಗದು ವಶ ಚುನಾವಣಾ ಅಕ್ರಮ ತಡೆಗೆ ತೀವ್ರ ನಿಗಾ: ಡಾ.ಕೆ.ಹರೀಶ್ ಕುಮಾರ್

Spread the love

ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ ಅಕ್ರಮ‌ ಹಣ ಅಥವಾ ಮದ್ಯ ಸಾಗಾಣಿಕೆ ಮೇಲೆ ತೀವ್ರ ನಿಗಾ ವಹಿಸಲಾಗಿದ್ದು, ಚೆಕ್ ಪೋಸ್ಟ್ ಗಳಲ್ಲಿ ಇದುವರೆಗೆ 62.55 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ 27 ಚೆಕ್ ಪೋಸ್ಟ್ ಗಳಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತಗೊಂಡಿರುವ ಎಸ್.ಎಸ್.ಟಿ. ತಂಡಗಳು ತಪಾಸಣೆ ಸಂದರ್ಭದಲ್ಲಿ 62,55,510 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿರುತ್ತದೆ.

ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಪೊಲೀಸ್ ಮತ್ತಿತರ ತಂಡಗಳಿಂದ ಪರಿಶೀಲಿಸಿದ ಬಳಿಕ 19,83,890 ಲಕ್ಷ ರೂಪಾಯಿಗಳನ್ನು ಸಂಬಂಧಪಟ್ಟವರಿಗೆ ಹಿಂದಿರುಗಿಸಲಾಗಿದೆ. ಇನ್ನುಳಿದ 42,71,620 ರೂಪಾಯಿಗಳನ್ನು ನಿಯಮಾವಳಿ ಪ್ರಕಾರ ಹೆಚ್ಚಿನ ತನಿಖೆಗಾಗಿ ಆದಾಯ ತೆರಿಗೆ ಇಲಾಖೆಗೆ ಒಪ್ಪಿಸಲಾಗಿರುತ್ತದೆ.

4 ಸಾವಿರ ಲೀಟರ್ ಮದ್ಯ ವಶ:

ಉಪ ಚುನಾವಣೆ ಹಿನ್ನೆಲೆಯಲ್ಲಿ ವಿವಿಧೆಡೆ ತಪಾಸಣೆ ಕೈಗೊಂಡು ಒಟ್ಟಾರೆ 11.25 ಲಕ್ಷ ಮೌಲ್ಯದ 4020 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಅಬಕಾರಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟಾರೆ 42.26 ಲಕ್ಷ ಮೌಲ್ಯದ ಒಟ್ಟು 16 ಬೈಕ್ ಗಳು, 1 ಕಂಟೇನರ್, 1 ಟ್ಯಾಂಕರ್, 4 ಕಾರು‌ ಹಾಗೂ ಒಂದು ಜೀಪು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಮತ್ತು ಪೊಲೀಸ್ ಕಾರ್ಯಾಚರಣೆಯಲ್ಲಿ ಮದ್ಯ‌ ಹಾಗೂ ಸಾಗಾಣಿಕೆಗೆ ಬಳಸಲಾಗುತ್ತಿದ್ದ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಅಬಕಾರಿಗೆ ಸಂಬಂಧಿಸಿದಂತೆ ಒಟ್ಟಾರೆ 128 ಉಲ್ಲಂಘನೆ ಪ್ರಕರಣಗಳು ವರದಿಯಾಗಿರುತ್ತವೆ.

 


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ