Breaking News

118 ಬಿಎಂಟಿಸಿ ನೌಕರರು ವಜಾ – ಸೀನಿಯರ್ ನೌಕರರಿಗೆ ನಿವೃತ್ತಿ ಎಚ್ಚರಿಕೆ: ಮುಷ್ಕರ ನಿರತರಿಗೆ ಬಿಎಂಟಿಸಿ ಬಿಗ್ ಶಾಕ್

Spread the love

ಬೆಂಗಳೂರು; ಸಾರಿಗೆ ನೌಕರರ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದ್ದು, ಕರ್ತವ್ಯಕ್ಕೆ ಹಾಜರಾಗದ ಸಾರಿಗೆ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಎಂಟಿಸಿ ಮುಂದಾಗಿದ್ದು, ಮುಷ್ಕರ ಹತ್ತಿಕ್ಕಲು ಸರ್ವಪ್ರಯತ್ನ ನಡೆಸಿದೆ.

ಮುಷ್ಕರದಲ್ಲಿ ಭಾಗವಹಿಸಿರುವ 118 ಸಾರಿಗೆ ಸಿಬ್ಬಂದಿಗಳನ್ನು ಬಿಎಂಟಿಸಿ ವಜಾ ಮಾಡಿ ಆದೇಶ ಹೊರಡಿಸಿದೆ. ಇದೇ ವೇಳೆ ಸೀನಿಯರ್ ನೌಕರರಿಗೆ ನಿವೃತ್ತಿ ನಿಡುವ ಎಚ್ಚರಿಕೆಯನ್ನು ನೀಡಿದೆ. 55 ವರ್ಷ ಮೇಲ್ಪಟ್ಟ ಬಿಎಂಟಿಸಿ ಸಿಬ್ಬಂದಿ ವೈದ್ಯಕೀಯ ಹಾಗೂ ದೇಹದಾರ್ಡ್ಯತೆ ಪ್ರಮಾಣ ಪತ್ರವನ್ನು ಏಪ್ರಿಲ್ 12ರಂದು ಸಲ್ಲಿಸಬೇಕು ಎಂದು ಸಂಸ್ಥೆ ಸೂಚಿಸಿದೆ.

ಮೆಡಿಕಲ್ ಪ್ರಮಾಣಪತ್ರ ಸಲ್ಲಿಸದಿದ್ದಲ್ಲಿ ಸೇವೆಯಿಂದ ನಿವೃತ್ತಿ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದೆ. ಬಿಎಂಟಿಸಿಯ 998 ಸಿಬ್ಬಂದಿಗಳು 55 ವರ್ಷ ಮೇಲ್ಪಟ್ಟಿದ್ದು ಅವರಿನ್ನೂ ಸರ್ಟಿಫಿಕೇಟ್ ಸಲ್ಲಿಸಿಲ್ಲ ಎನ್ನಲಾಗಿದೆ. ಒಟ್ಟಾರೆ ಸಾರಿಗೆ ನೌಕರರ ಮುಷ್ಕರ ಹತ್ತಿಕ್ಕಲು ಸರ್ಕಾರ ಎಲ್ಲಾ ರೀತಿಯ ಕ್ರಮಕ್ಕೆ ಮುಂದಾಗಿದೆ.


Spread the love

About Laxminews 24x7

Check Also

ಬಿಡಿಸಿಸಿ ಬ್ಯಾಂಕ್‌ ಗೆ ಲಾಭವಾಗಲಿ, ನಷ್ಟವಾಗಲಿ ರೈತರಿಗೆ ಸಾಲ ನೀಡಲೇಬೇಕು: ಸಚಿವ ಸತೀಶ್‌ ಜಾರಕಿಹೊಳಿ

Spread the loveಬೆಳಗಾವಿ: ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಣ್ಣಾಸಾಹೇಬ್‌ ಜೊಲ್ಲೆ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಬಿಡಿಸಿಸಿ ಬ್ಯಾಂಕ್‌ ಗೆ ಲಾಭವಾಗಲಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ