ರಾಯಚೂರು: ಬಿಜೆಪಿ ಎಂದರೆ ‘ಭ್ರಷ್ಟಾಚಾರ ಜನತಾ ಪಾರ್ಟಿ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು.
ಮುದಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಎಸ್ ವೈ ಕುಟುಂಬ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಸಿಎಂ ಮನೆಗೆ ಹೋಗುತ್ತಾರೆ ಎಂದು ಅದೇ ಪಕ್ಷದ ಯತ್ನಾಳ ಹೇಳಿದ್ದಾರೆ. ಬಿಜೆಪಿಯವರು ಎಲ್ಲಿಯಾದರೂ ಸೋಲ್ತೀವಿ ಅಂತ ಹೇಳಿದ್ದಾರೆ. ಯಡಿಯೂರಪ್ಪನವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಯಡಿಯೂರಪ್ಪನವರು ಮೊದಲಿಬಿಂದಲೂ ಸುಳ್ಳು ಹೇಳಿಕೊಂಡೆ ಬಂದಿದ್ದಾರೆ ಎಂದರು.
ಕಾಂಗ್ರೆಸ್ ಅಡ್ರೆಸ್ ಇಲ್ಲದಂತೆ ಹೋಗುತ್ತದೆ ಎನ್ನುವುದು ಬಾಲಿಶತನದ ಹೇಳಿಕೆ. ಬಿಜೆಪಿಯವರಿಗೆ ನೂರಕ್ಕೆ ನೂರರಷ್ಟು ಸೋಲುತ್ತೇವೆ ಎಂದು ಗೊತ್ತಾಗಿದೆ. ಚುನಾವಣೆಯಲ್ಲಿ ಬಿಜೆಪಿಯವರು ದುಡ್ಡು ಹಂಚಿಕೆ ಮಾಡಿದರೆ ಕಾಂಗ್ರೆಸ್ ನವರು ಸುಮ್ಮನೆ ಕೂಡಬೇಕಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
Laxmi News 24×7