Breaking News

ಒಂದೇ ದಿನದಲ್ಲಿ 10,250 ಮಂದಿಗೆ ಸೋಂಕು..!

Spread the love

ಬೆಂಗಳೂರು: ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇಂದು ಬಂದ ನಂಬರ್ಸ್ ನಾಳೆಗೆ ಮತ್ತಷ್ಟು ಏರಿಕೆಯಾಗುತ್ತಿದೆ. ಸೋಂಕಿತರ ಸಂಖ್ಯೆ ನೋಡುತ್ತಿದ್ರೆ ತಲೆ ಗಿರ್ ಎನ್ನುತ್ತಿದೆ. ಇಂದು ಒಂದೇ ದಿನ 10,250 ಮಂದಿಗೆ ಸೋಂಕು ದೃಢಪಟ್ಟಿದೆ.

9,635 ರ್ಯಾಪಿಡ್ ಆಯಂಟಿಜೆನ್ ಹಾಗೂ 1,23,071 RTPCR ಟೆಸ್ಟ್ ಸೇರಿದಂಯೆ ಒಟ್ಟು 1,32,706 ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 10,250 ಮಂದಿಗೆ ಕೊರೊನಾ ದೃಢಪಟ್ಟಿದೆ.

ಬೆಂಗಳೂರು ಒಂದರಲ್ಲೇ 7584 ಜನ ಸೋಂಕಿತರಿದ್ದಾರೆ. 27 ಜನ ಬೆಂಗಳೂರಿನಲ್ಲಿ ಕೊರೊನಾ ಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಒಂದೇ ದಿನ 40 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. 2,638 ಮಂದಿ ಕೊರೊನಾದಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈ ಮೂಲಕ 9,83,157 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. 440 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ