ಬೀದರ್ : ಉಪ ಚುನಾವಣೆ ಪ್ರಚಾರ ಹಿನ್ನೆಲೆ ಬಸವಕಲ್ಯಾಣ ನಗರಕ್ಕೆ ಆಗಮಿಸಿದ್ದ ಸಿಎಂ ಯಡಿಯೂರಪ್ಪ ಅವರ ಕಾರನ್ನು ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಹಾಗೂ ಕಾರ್ಯಕರ್ತರು ತಡೆದು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು. ಈ ವೇಳೆ ಮುತ್ತಿಗೆ ತಡೆಯಲು ಪೊಲೀಸರು ಹರಸಾಹಸ ಪಟ್ಟರು.
ನಗರಕ್ಕೆ ಸಿ.ಎಂ ಆಗಮಿಸುತ್ತಿದಂತೆ ಮಲ್ಲಿಕಾರ್ಜುನ ಖೂಬಾ ನಿವಾಸದ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ಸಿಎಂ ಸಂಚರಿಸುತ್ತಿದ್ದ ವಾಹನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಸಿ.ಎಂ ಯಡಿಯೂರಪ್ಪ ನವರೇ ನಮಗೆ ನ್ಯಾಯ ಕೊಡಿ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು.
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಂಡಾಯ ಅಭ್ಯರ್ಥಿ ಖೂಬಾ ಮನೆಯ ಮುಂದೆ ಭಾರಿ ಪೊಲೀಸ ಬಂದೋ ಬಸ್ತ್ ಮಾಡಲಾಗಿತ್ತು.
Laxmi News 24×7