ಬೀದರ್ : ದಿನೇ ದಿನೇ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಸರ್ವ ಪಕ್ಷ ಸಭೆ ಕರೆದಿದ್ದಾರೆ. ಏಪ್ರಿಲ್ 18, 19ರಂದು ಎಲ್ಲಾ ಪಕ್ಷದ ಹಿರಿಯರ ಜೊತೆ ಕೋವಿಡ್ ನಿಯಂತ್ರಣದ ಬಗ್ಗೆ ಚರ್ಚೆ ನಡೆಸುವುದಾಗಿ ಸೋಮವಾರ ಸಿಎಂ ಯಡಿಯೂರಪ್ಪ ತಿಳಿಸಿದ್ರು.
ಬಸವ ಕಲ್ಯಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿದಂತೆ ಸರ್ವ ಪಕ್ಷಗಳ ಹಿರಿಯರ ಜೊತೆ ಸಭೆ ನಡೆಸುವುದಾಗಿ ಸಿಎಂ ತಿಳಿಸಿದ್ದಾರೆ. ಸಭೆಯಲ್ಲಿ ಕಠಿಣ ನಿಯಮಗಳನ್ನು ಕೈಗೊಳ್ಳುವ ಸಾಧ್ಯತೆ ಇದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗುತ್ತಾ ಎಂಬುದು ಆತಂಕಕ್ಕೆ ಕಾರಣವಾಗಿದೆ.
ಇನ್ನು ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಮಾತನಾಡಿದ ಸಿಎಂ, ನೈಟ್ ಕರ್ಫ್ಯೂ ಸದ್ಯ ಕೆಲವು ನಗರಳಲ್ಲಿ ಮಾತ್ರ ಇದೆ. ಕೋವಿಡ್ ಹೀಗೆ ಮುಂದುವರೆದರೆ ರಾಜ್ಯದ ಹಲವು ಭಾಗಗಳಿಗೆ ನೈಟ್ ಕರ್ಫ್ಯೂ ವಿಸ್ತರಿಸುವ ಅನಿವಾರ್ಯತೆ ಇದೆ ಎಂದರು.
Laxmi News 24×7