Breaking News

ಕೊರೊನಾ ಕೂಪವಾಯ್ತು ಬೆಂಗಳೂರು : ಇಂದು ಮತ್ತೆ ಕೊರೊನಾ ಬ್ಲಾಸ್ಟ್ Corona

Spread the love

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ ಕೊರೊನಾ ಸ್ಫೋಟವಾಗುತ್ತಿದೆ. ನಗರದ ಗಲ್ಲಿ ಗಲ್ಲಿಯಲ್ಲೂ ಕೊರೊನಾ ಕೇಸ್ ಗಳು ಪತ್ತೆಯಾಗುತ್ತಿರೋದು ಆತಂಕಕ್ಕೆ ಕಾರಣವಾಗಿದೆ.

ನಿನ್ನೆ ಒಂದೇ ದಿನ 7 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು, ಮೆಟ್ರೋ ಮಂದಿಗೆ ಆಘಾತ ನೀಡಿದ್ದರೇ ಇಂದು ಮತ್ತೆ ಕೊರೊನಾ ಬ್ಲಾಸ್ಟ್ ಆಗುವ ಸಾಧ್ಯತೆಗಳಿವೆ. ಮೂಲಗಳ ಪ್ರಕಾರ ಇಂದು 6574 ಜನರಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಮುಖ್ಯವಾಗಿ ಬೆಂಗಳೂರು ದಕ್ಷಿಣ ವಿಭಾಗದಲ್ಲೇ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣದಲ್ಲಿ 1126 ಜನರಲ್ಲಿ ಸೋಂಕು ಪತ್ತೆಯಾಗಿದೆ. ಪಶ್ಚಿಮದಲ್ಲಿ 1064, ಪೂರ್ವದಲ್ಲಿ 988 ಜನರಿಗೆ ಸೋಂಕು ದೃಢಪಟ್ಟಿದೆ.

ಇನ್ನೊಂದೆಡೆ ಕೊರೊನಾ ಏರಿಕೆ ಕುರಿತು ಬಿಬಿಎಂಪಿ ಚೀಫ್ ಕಮಿಷನರ್ ಗೌರವ್ ಗುಪ್ತಾ ಇಂದು ಎಂಟು ವಲಯಗಳ ವಲಯ ಆಯುಕ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ