ಬೆಳಗಾವಿ: ಕೆಲಸದ ಒತ್ತಡಗಳಿಂದಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಲು ಸಾಧ್ಯವಾಗಿರಲಿಲ್ಲ. ಇಂದಿನಿಂದ ಉಪಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಮಂಗಳಾ ಅಂಗಡಿ ಪರ ಪ್ರಚಾರ ನಡೆಸುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ಇರುವುದರಿಂದ ಪ್ರಚಾರದಲ್ಲಿ ಭಾಗಿಯಾಗಲು ಸಾಧ್ಯವಾಗಿಲ್ಲ. ಇಂದು ವರದಿಯಲ್ಲಿ ಏನು ಬರಲಿದೆ ಎಂಬುದನ್ನು ನೋಡಿಕೊಂಡು ಪ್ರಚಾರದಲ್ಲಿ ಪಾಲ್ಗೊಳ್ಳುವ ಬಗ್ಗೆ ನಿರ್ಧರಿಸುತ್ತಾರೆ. ಬೆಳಗಾವಿ ಕ್ಷೇತ್ರದಿಂದ ಮಂಗಲಾ ಅಂಗಡಿಯವರನ್ನು ಗೆಲ್ಲಿಸಿ ಸಂಸತ್ ಗೆ ಕಳುಹಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದೇವೆ ಎಂದರು.
ಇದೇ ವೇಳೆ ಸಿಡಿ ಯುವತಿ ಉಲ್ಟಾ ಹೊಡೆದಿದ್ದಾಳೆ ಎಂಬ ಸುದ್ದಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಾಲಚಂದ್ರ ಜಾರಕಿಹೊಳಿ, ಆಕೆ ಹೇಳಿಕೆ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಸಿಡಿ ಕೇಸ್ ಗೆ ಸಂಬಂಧಿಸಿದಂತೆ ನಾವು ಕಾನೂನು ಹೋರಾಟ ಮಾಡುತ್ತಿದ್ದು, ಎಸ್ ಐಟಿ ಕೂಡ ತನಿಖೆ ನಡೆಸುತ್ತಿದೆ. ಸಮಗ್ರ ತನಿಖೆ ನಡೆದು ಸತ್ಯಾಸತ್ಯತೆ ಹೊರಬರಲಿ ಎಂದು ಹೇಳಿದರು.
Laxmi News 24×7