Breaking News

ಉಪ ಚುನಾವಣೆ: ಬೆಳಗಾವಿಯಲ್ಲಿ ‌ಮುಖ್ಯಮಂತ್ರಿ‌ ಬಿ.ಎಸ್. ಯಡಿಯೂರಪ್ಪ ಠಿಕಾಣಿ

Spread the love

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪರವಾಗಿ ಪ್ರಚಾರ ಮಾಡುವುದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಏ. 14 ಮತ್ತು 15ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಯಾಚಿಸಲಿದ್ದಾರೆ.

14ರಂದು ಮಧ್ಯಾಹ್ನ 1.15ಕ್ಕೆ ಮೂಡಲಗಿಯಲ್ಲಿ, ಸಂಜೆ 5.15ಕ್ಕೆ ಗೋಕಾಕದಲ್ಲಿ ನಡೆಯುವ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 9ಕ್ಕೆ ಬೆಳಗಾವಿಗೆ ಬಂದು ತಂಗಲಿದ್ದಾರೆ.

15ರಂದು ನಗರದಲ್ಲಿ ಮುಖಂಡರ ಸರಣಿ ಸಭೆಗಳು ಹಾಗೂ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರೊಂದಿಗೆ ಅಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಕೂಡ ಭಾಗವಹಿಸಲಿದ್ದಾರೆ. ಸಚಿವ ಸಚಿವ ಅರವಿಂದ ಲಿಂಬಾವಳಿ ಅವರೂ ಪ್ರಚಾರ ನಡೆಸಲಿದ್ದಾರೆ.

ಏ.17ರಂದು ಮತದಾನ ನಡೆಯಲಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ