Breaking News

ಜುಲೈ 26 ರಂದು ಸಂಜೆ 4 ಗಂಟೆಗೆ ಝೂಮ್ ವೆಬಿನಾರ್ ,ಶೇ 10 EWS ಮೀಸಲಾತಿ ಚಿಂತನ ಮಂಥನ: ವೆಬಿನಾರ್ ಮೂಲಕ ಗಣ್ಯರಿಂದ ಚರ್ಚೆ

Spread the love

ಬೆಳಗಾವಿ: ರಾಜ್ಯ ಸರ್ಕಾರ ಇತ್ತೀಚೆಗೆ ಬ್ರಾಹ್ಮಣರಿಗೆ ಶೇ 10 ರಷ್ಟು ಮೀಸಲಾತಿ ಜಾರಿ ಮಾಡಿ ಆದೇಶಿಸಿದ್ದು, ಎಸ್ ಸಿ/ ಎಸ್ ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಇದರಿಂದಾಗುವ ಪರೆಣಾಮಗಳ ಕುರಿತಾಗಿ ಚಿಂತನ-ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ವಿದ್ಯಾರ್ಥಿ ಬಂಧುತ್ವ ವೇದಿಕೆ ಕರ್ನಾಟಕ ಹಾಗೂ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಸಹಯೋಗದಲ್ಲಿ ಇದೇ ಜುಲೈ 26 ರಂದು ಸಂಜೆ 4 ಗಂಟೆಗೆ ಝೂಮ್ ವೆಬಿನಾರ್ ಮೂಲಕ ಈ ಕಾರ್ಯಕ್ರಮ ನಡೆಯಲಿದೆ.

ಕಲಬುರಗಿ ಕನಕಗುರಪೀಠ ಸಿದ್ಧರಾಮಾನಂದ ಸ್ವಾಮೀಜಿಗಳು ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಶ್ರೀಬಸವ ಜಯ ಮೃತ್ಯುಂಜಯ ಶ್ರೀಗಳು, ಪಂಚಮಸಾಲಿ ಗುರುಪೀಠ ಕೂಡಲಸಂಗಮ ಹಾಗೂ ಶ್ರೀ ವಿಶ್ವನಾಥ ಕೋರಣೇಶ್ವರ ಸ್ವಾಮೀಜಿಗಳು, ಉಸ್ತೂರಿ ಮತ್ತು ಧುತ್ತರಗಾಂವ ಮಠ ಇವರುಗಳು ಆಶಯ ನುಡಿಗಳನ್ನಾಡಲಿದ್ದಾರೆ.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಹೆಚ್. ಎನ್ ನಾಗಮೋಹನದಾಸ ರವರು ಅಧ್ಯಕ್ಷತೆ ವಹಿಸಲಿದ್ದು, ರಾಷ್ಟ್ರೀಯ ಕಾನೂನು ಶಾಲೆ ಬೆಂಗಳೂರು ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಪ್ರದೀಪ ರಾಮಾವತ್ ರವರು ವಿಷಯ ಮಂಡನೆ ಮಾಡಲಿದ್ದಾರೆ.

ರಾಜ್ಯದ ಕಾಂಗ್ರೆಸ್ ಮುಖಂಡ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು,
ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ, ಹೈಕೋರ್ಟ್ ವಕೀಲರಾದ ಅನಂತ ನಾಯ್ಕ್ ಎನ್, ವಿದ್ಯಾರ್ಥಿ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ತೋಳಿ ಭರಮಣ್ಣ ಸೇರಿದಂತೆ ವಿವಿಧ ವಿಭಾಗಗಳ ಸಂಘಟನೆಯ ಸಂಚಾಲಕರು ಉಪಸ್ಥಿತರಿರಲಿದ್ದಾರೆ.

 

ಆಸಕ್ತರು ವೆಬಿನಾರ್ ಝೂಮ್ ಆಪ್ ಮೂಲಕ ಮೀಟಿಂಗ್ ಐಡಿ:5992672811
ಪಾಸ್ ವರ್ಡ್: AILUKARNA3 ನೆರವಿನಿಂದ ಕಾರ್ಯಕ್ರಮವನ್ನು ಸಾಮಾಜಿಕ ಜಾಲತಾಣದಲ್ಲಿ ವೀಕ್ಷಣೆ ಮಾಡುವಂತೆ ಸಂಘಟನೆ ಮನವೆ ಮಾಡಿದೆ.


Spread the love

About Laxminews 24x7

Check Also

ಮಂಡ್ಯದಲ್ಲಿ ಮೂರು ದಿನಗಳವರೆಗೆ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಕ್ತಾಯ

Spread the loveಮಂಡ್ಯ : ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ