Breaking News

ಅಪಘಾತದ ಸಮಯದಲ್ಲಿ ನಾನೇ ಕಾರನ್ನು ಓಡಿಸುತ್ತಿದ್ದೆ: ವಿಜಯ್ ಕುಲಕರ್ಣಿ

Spread the love

ಹುಬ್ಬಳ್ಳಿ:ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಹೋದರ ವಿಜಯ್ ಕುಲಕರ್ಣಿ ಸೋಮವಾರದ ಅಪಘಾತದ‌ ಘಟನೆಯಲ್ಲಿ ತಾನೇ ಕಾರನ್ನು ಓಡಿಸುತ್ತಿದ್ದೆ ಎಂದು ಹೇಳಿದ್ದಾರೆ.

ಎದುರಿನಲ್ಲಿ ಬಂದ ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ ಪಕ್ಕದಲ್ಲಿನ ಗಾಡಿಗಳಿಗೆ ಡಿಕ್ಕಿ ಹೊಡೆಯಿತು. ಇದು ಆಕಸ್ಮಿಕ ಘಟನೆಯಷ್ಟೆ.ನಾನು ಕುಡಿದಿರಲಿಲ್ಲ.ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ.ನಾನೇ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ವ್ಯವಸ್ಥೆ ಮಾಡಿದ್ದೇ‌ನೆ.ಆನಂತರವೇ ನಾನು ಹೋಗಿದ್ದೆ ಎಂದಿದ್ದಾರೆ.

ಅಪಘಾತದಲ್ಲಿ ಮೃತರಾದವರು ಧಾರವಾಡದ ಶೇಖರ್ ಹುಡ್ಡರ್ (37) ಮತ್ತು ಚರಣ್ ನಾಯಕ್ (17) ಎಂದು ಗುರುತಿಸಲಾಗಿದೆ. ಧಾರವಾಡದ ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕಿನ ಪ್ರಧಾನ ಕಚೇರಿಯ ಸಮೀಪವಿರುವ ಧಾರವಾಡ-ಬೆಳಗಾವಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

ಕೆವಿಜಿ ಬ್ಯಾಂಕಿನ ಕಾಂಪೌಂಡ್ ಗೋಡೆಯ ಬಳಿ ಆರು ಜನರು ನಿಂತಿದ್ದರು, ಎಸ್‌ಯುವಿ ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರು ಮತ್ತು ಇತರರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಎಸ್ಯುವಿ ಕೂಡ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

Spread the love ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ