ಬೆಂಗಳೂರು: ಕೊಲೆ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಜುನಾಥ ಅಲಿಯಾಸ್ ಅಂಬಾರಿ ಮೇಲೆ ಫೈರಿಂಗ್ ಮಾಡಲಾಗಿದೆ.
ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ಸ್ ಪೆಕ್ಟರ್ ಕಿಶೋರ್ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದು, ಆರೋಪಿ ಮಂಜುನಾಥ್ ನನ್ನು ಬಂಧಿಸಲಾಗಿದೆ.
ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದಬಲ್ ಮರ್ಡರ್ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದು, ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಶರಣಾಗುವಂತೆ ಸೂಚಿಸಿದರೂ, ಕೇಳದಿದ್ದಾಗ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ವಿವಿಧ ಠಾಣೆಗಳಲ್ಲಿ ಮಂಜುನಾಥನ ವಿರುದ್ಧ ಕೇಸ್ ದಾಖಲಾಗಿವೆ ಎನ್ನಲಾಗಿದೆ.
Laxmi News 24×7