Breaking News

ಬೆಳಗಾವಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಯು.ಟಿ.ಖಾದರ್‌ ಅವರ ಕಾರಿಗೆ ಅಪಘಾತ

Spread the love

ದಾವಣಗೆರೆ: ಇಲ್ಲಿನ ಆನಗೋಡು ಬಸ್‌ ನಿಲ್ದಾಣದ ಬಳಿ ಮಾಜಿ ಸಚಿವ ಯು.ಟಿ.ಖಾದರ್‌ ಅವರ ಕಾರಿಗೆ ಅಪಘಾತವಾಗಿದೆ.

ನಟ ಶಂಕರ್‌ ನಾಗ್‌ ಕಾರಿಗೆ ಅಪಘಾತವಾದ ಸ್ಥಳದಲ್ಲೇ ಈ ಘಟನೆ ನಡೆದಿದೆ. ಮುಂದೆ ಹೋಗುತಿದ್ದ ಕಂಟೇನರ್‌ಗೆ ಖಾದರ್‌ ಅವರ ಕಾರು ಗುದ್ದಿದೆ. ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಮಾಜಿ ಸಚಿವರು ಅಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಎಸ್‌ಪಿ ಹನಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಖಾದರ್‌ ಅವರು ಬೆಂಗಳೂರಿಗೆ ವಾಪಸ್ಸಾದರು.

ಬೆಳಗಾವಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ.


Spread the love

About Laxminews 24x7

Check Also

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ

Spread the loveಬೆಂಗಳೂರು: ರಾಮ ಮಂದಿರ ದೇಣಿಗೆ ಹಗರಣವನ್ನು ಬಿಜೆಪಿ ಮುಚ್ಚಿ ಹಾಕೋಕೆ ಪ್ರಯತ್ನ ಮಾಡ್ತಿದೆ ಅಂತ ಗೃಹ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ