Home / Uncategorized / CBSE Board Exams 2021: ಸಿಬಿಎಸ್​ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ದಿನಾಂಕ ಮುಂದೂಡಿಕೆ

CBSE Board Exams 2021: ಸಿಬಿಎಸ್​ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ದಿನಾಂಕ ಮುಂದೂಡಿಕೆ

Spread the love

ದೆಹಲಿ: ದೇಶದೆಲ್ಲೆಡೆ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯಿಂದಾಗಿ ಶೈಕ್ಷಣಿಕ ವಲಯ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದಾಗಿ ಸಿಬಿಎಸ್​ಇ ಬೋರ್ಡ್​ನ 10 ಮತ್ತು 12ನೇ ತರಗತಿಗಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ ಇಲಾಖೆಯೊಂದಿಗೆ ಸಭೆ ನಡೆಸಿದ್ದಾರೆ. ವಿವಿಧ ರಾಜ್ಯಗಳ ಅಭಿಪ್ರಾಯವನ್ನು ಸಂಗ್ರಹಿಸಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿ, 12ನೇ ತರಗತಿ ಪರೀಕ್ಷೆಯ ದಿನಾಂಕ ಮುಂದೂಡಿ ಆದೇಶ ಹೊರಡಿಸಲಾಗಿದೆ. ಈ ಸಂದರ್ಭ ವಿದ್ಯಾರ್ಥಿಗಳ ಹಿತರಕ್ಷಣೆ ಮುಖ್ಯ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾಗಿ ತಿಳಿದುಬಂದಿದೆ.

ಸದ್ಯದ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ಕಷ್ಟವಿದೆ, ಹಾಗಂತ ಆನ್​ಲೈನ್​ ಪರೀಕ್ಷೆ ನಡೆಸಿದರೂ ದೇಶದ ಎಲ್ಲಾ ಭಾಗಗಳ ಮಕ್ಕಳಿಗೂ ಒಂದೇ ತೆರನಾಗಿ ತಂತ್ರಜ್ಞಾನ ಸೌಲಭ್ಯ ಸಿಗುತ್ತಿದೆ ಎಂದು ಹೇಳಲಾಗುವುದಿಲ್ಲ. ಹೀಗಾಗಿ 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿದೆ ಅತಿ ಶೀಘ್ರದಲ್ಲಿ ಪರೀಕ್ಷಾ ದಿನಾಂಕವನ್ನು ತಿಳಿಸಲಾಗುವುದು ಹಾಗೂ 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಹೇಳಲಾಗಿದೆ.

ಕೊರೊನಾ ಸೋಂಕಿನ ಹೆಚ್ಚಳದಿಂದ ಸಿಬಿಎಸ್​ಇ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಕೋರಿ 2 ಲಕ್ಷಕ್ಕೂ ಹೆಚ್ಚು ಪಿಟಿಷನ್ ಸಲ್ಲಿಸಲಾಗಿತ್ತು. #cancelboardexam2021 ಎಂಬ ಹ್ಯಾಷ್​ಟ್ಯಾಗ್​ನಡಿ ಪರೀಕ್ಷೆ ರದ್ದುಗೊಳಿಸಲು ಟ್ವಿಟರ್​ನಲ್ಲಿ ಆಗ್ರಹಿಸಲಾಗಿತ್ತು. ಈ ಹ್ಯಾಷ್​ಟ್ಯಾಗ್​ನಡಿ ಕಳೆದ ರವಿವಾರ ಒಂದೇ ದಿನ 5 ಲಕ್ಷಕ್ಕೂ ಹೆಚ್ಚು ಟ್ವೀಟ್​ಗಳನ್ನು ಮಾಡಲಾಗಿತ್ತು. ಈ ಮುನ್ನ ಬಿಡುಗಡೆಯಾಗಿದ್ದ ವೇಳಾಪಟ್ಟಿಯ ಪ್ರಕಾರ ಮೇ 4ರಿಂದ ಜೂನ್​ 10ರವರೆಗೆ ಎರಡು ತರಗತಿಗಳಿಗೆ ಪರೀಕ್ಷೆ ನಡೆಯಲಿದೆ ಎನ್ನಲಾಗಿತ್ತು. ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಮೊದಲ ಪರೀಕ್ಷೆ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಎರಡನೇ ಪರೀಕ್ಷೆ ನಡೆಯಲಿದೆ ಎನ್ನಲಾಗಿತ್ತು


Spread the love

About Laxminews 24x7

Check Also

ಕುಸ್ತಿ ಗ್ರಾಮೀಣ ಭಾಗದ ಬಹುದೊಡ್ಡ ಕ್ರೀಡೆ

Spread the love ರಬಕವಿ-ಬನಹಟ್ಟಿ: ಕುಸ್ತಿ ಗ್ರಾಮೀಣ ಭಾಗದ ಬಹುದೊಡ್ಡ ಕ್ರೀಡೆ. ಗ್ರಾಮೀಣ ಭಾಗದ ಜನರು ಕುಸ್ತಿಗೆ ಬಹಳಷ್ಟು ಮಹತ್ವ ನೀಡುತ್ತಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ