Breaking News

ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಸರ್ಕಾರ ಅದರತ್ತ ಹೆಜ್ಜೆ ಇಡಬಾರದು: ಪ್ರಹ್ಲಾದ್ ಜೋಶಿ

Spread the love

ಹುಬ್ಬಳ್ಳಿ; ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ. ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಹೆಜ್ಜೆ ಇಡಬಾರದು ಎಂದು ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇ ದಿನೇ ಕರೋನಾ ಪ್ರಕರಣ ಹೆಚ್ಚುತ್ತಿದೆ. ಹಾಗೆಂದು ಸದ್ಯಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಅವಶ್ಯಕತೆ ಇಲ್ಲ. ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ. 17 ರ ನಂತರ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಯಾವುದೇ ಸಾಧ್ಯತೆಗಳಿಲ್ಲ. ರಾಜ್ಯದ ಜನ ಸರ್ಕಾರದ ನಿರ್ದೇಶನಗಳನ್ನು ಪಾಲನೆ ಮಾಡುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಮುಂದಾಗಬೇಕು. ಆದರೆ ಯಾರೂ ಇದನ್ನು ಗಂಭೀರವಾಗಿ ಪರಿಗಣಿಸದಿರೋದು ದುರದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೆಲವೊಂದು ಕಟ್ಟುನಿಟ್ಟಿನ ನಿಯಮಗಳನ್ನು ಜನರೇ ಜಾರಿಗೆ ತರಬೇಕು. ಜೊತೆಗೆ ಸರ್ಕಾರ, ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಆಡಳಿತ ಮಂಡಳಿಗಳು ಸರಿಯಾಗಿ ಅನುಷ್ಠಾನಕ್ಕೆ ತರಬೇಕು. ಬಹುತೇಕ ಜನ ಮಾಸ್ಕ್ ಹಾಕ್ತಿಲ್ಲ, ಸಾಮಾಜಿಕ ಅಂತರವನ್ನೂ ಕಾಪಾಡ್ತಿಲ್ಲ. ಸಾಮಾಜಿಕ ಅಂತರ ಕಾಪಾಡಿ ಅಂದ್ರೆ ನಮ್ಮ ವಿರುದ್ಧವೇ ಜನ ಸಿಟ್ಟಾಗೋ ಪರಿಸ್ಥಿತಿ ಇದೆ. ಯಾರಿಗೂ ಇದರ ಗಂಭೀರತೆಯಿಲ್ಲ. ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ ಅನ್ನೋದನ್ನು ಅರ್ಥಮಾಡಿಕೊಳ್ಳಬೇಕು. ಕೊರೋನಾ ಎರಡನೇ ಅಲೆ ಅತ್ಯಂತ ತೀವ್ರವಾಗಿದೆ. ಸಾವು-ನೋವಿನ ಸಂಖ್ಯೆಯೂ ಅಧಿಕವಿದೆ. ಇದನ್ನು ಅರ್ಥಮಾಡಿಕೊಂಡು ಜನ ವರ್ತಿಸಬೇಕು. ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಸರ್ಕಾರ ಅದರತ್ತ ಹೆಜ್ಜೆ ಇಡಬಾರದು ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಪುರುಷರಿಗೆ ಸಾರಿಗೆ ಬಸ್ ಗಳಲ್ಲಿ ‘ಉಚಿತ ಪ್ರಯಾಣ’ ಪ್ರಸ್ತಾವನೆ ಸದ್ಯಕ್ಕೆ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

Spread the love ಹುಬ್ಬಳ್ಳಿ : ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ನಿನ್ನೆ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಕ್ಕಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ