Breaking News
Home / ರಾಜ್ಯ / ರಿಮಿಡೆಸಿವಿರ್ ಔಷಧ ದುರ್ಬಳಕೆ ಮಾಡಿದರೆ ಹುಷಾರ್ : ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ

ರಿಮಿಡೆಸಿವಿರ್ ಔಷಧ ದುರ್ಬಳಕೆ ಮಾಡಿದರೆ ಹುಷಾರ್ : ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ

Spread the love

ಹುಮ್ನಾಬಾದ್ : ದೇಹದಲ್ಲಿ ಕೋವಿಡ್ ವೈರಾಣು ಪ್ರಮಾಣ ಹೆಚ್ಚಾದಾಗ ನೀಡಲಾಗುವ ರಿಮಿಡೆಸಿವಿರ್ ( Remidesivir) ಚುಚ್ಚುಮದ್ದು ಔಷಧಿಯ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕೋವಿಡ್ ನಿಯಂತ್ರಣ ಕಾಯ್ದೆ ಅಡಿ ಕಠಿಣ ಕ್ರಮ ಜರುಗಿಸುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.

ಹುಮ್ನಾಬಾದ್ ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಮಿಡೆಸಿವಿರ್ ಔಷಧ ಕೊರತೆ ಇಲ್ಲ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಆದರೆ ಈ ಔಷಧಿಯ ಕೃತಕ ಅಭಾವ ಸೃಷ್ಟಿ ಮಾಡಲಾಗುತ್ತಿದೆ. ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಇಂಥ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಈ ಚುಚ್ಚುಮದ್ದನ್ನು ಕೃತಕ ಅಭಾವ ಸೃಷ್ಟಿಸಿ ಕಳ್ಳ ಮಾರುಕಟ್ಟೆಯಲ್ಲಿ ದುಬಾರಿ ದರಕ್ಕೆ ಮಾರಾಟ ಮಾಡಿ ದುರ್ಲಾಭ ಪಡೆದರೆ ಕಠಿಣ ಕ್ರಮ ಜರುಗಿಸುವುದಾಗಿ ಬೊಮ್ಮಾಯಿ ಎಚ್ಚರಿಕೆ ನೀಡಿದರು‌

ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ಸರ್ಕಾರ ಬಹಳಷ್ಟು ಸಮಸ್ಯೆಗಳನ್ನು ಎದುರಿಸಿತ್ತು. ಆದರೆ ಈಗ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಸ್ಪತ್ರೆಗಳಲ್ಲಿ ಕೊವಿಡ್ ಗೆ ಸಂಬಂಧಿಸಿದ ಮೂಲಸೌಕರ್ಯಗಳನ್ನು ಅಳವಡಿಸಲಾಗಿದೆ. ಲಸಿಕೆ ಕೊರತೆಯೂ ಇಲ್ಲ ಎಂದು ಅವರು ಹೇಳಿದರು.

ಕೊವಿಡ್ ನಿಂದ ಗೃಹ ಇಲಾಖೆಯ ಸಿಬ್ಬಂದಿಯ ಸುರಕ್ಷತೆ ಮತ್ತು ಗೃಹ ಇಲಾಖೆಯಿಂದ ಕೋವಿಡ್ ನಿಯಂತ್ರಣಕ್ಕೆ ಆಗಬೇಕಾಗಿರುವ ಸೇವೆ ಬಗ್ಗೆ ಚರ್ಚೆ ನಡೆಸಲಾಗುವುದು. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆಯಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿ ಮಾರ್ಗಸೂಚಿ ಹೊರಡಿಸಲಾಗುವುದು ಎಂದರು.


Spread the love

About Laxminews 24x7

Check Also

ಕಲಬುರಗಿ: ಪಕ್ಷೇತರರಾಗಿ ಸ್ಪರ್ಧೆಗಿಳಿದ ದಂಪತಿ

Spread the loveಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾಗಿ ಪತಿ ಹಾಗೂ ಪತ್ನಿ ಪಕ್ಷೇತರರಾಗಿ ಕಣದಲ್ಲಿದ್ದು, ವಿಭಿನ್ನ ವಿಚಾರಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ