Breaking News

‘ಅನ್ನಭಾಗ್ಯ’ ಯೋಜನೆ BPL ಕಾರ್ಡ್ ದಾರರ ಅಕ್ಕಿ ಕಡಿತ, ಪಡಿತರಕ್ಕೆ ಹೊಸ ವ್ಯವಸ್ಥೆ -ರಾಗಿ ವಿತರಣೆ

Spread the love

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಪ್ರತಿ ಸದಸ್ಯರಿಗೆ 2 ಕೆಜಿ ಅಕ್ಕಿ 3 ಕೆಜಿ ರಾಗಿ ಹಾಗೂ ಪ್ರತಿ ಕಾರ್ಡ್ ಗೆ 2 ಕೆಜಿ ಗೋಧಿ ವಿತರಿಸಲಾಗುತ್ತದೆ.

ಹಿಂದೆ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ನೀಡುತ್ತಿದ್ದು ಕೆಲವು ಪಡಿತರ ಚೀಟಿದಾರರು ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿತ್ತು. ಹೀಗೆ ಶೇಕಡ 15 ರಷ್ಟು ಅನ್ನಭಾಗ್ಯ ಅಕ್ಕಿ ದುರ್ಬಳಕೆಯಾಗುತ್ತಿದೆ ಎನ್ನಲಾಗಿದ್ದು ಹೀಗಾಗಿ ಹೊಸ ನಿಯಮ ಜಾರಿಗೆ ತರಲಾಗಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಅಕ್ಕಿ ಕಡಿತಗೊಳಿಸಿ ಜೋಳ ನೀಡಲು ಸರ್ಕಾರ ನಿರ್ಧರಿಸಿದ್ದರೂ, ಈ ಬಾರಿ ಉತ್ಪಾದನೆ ಕುಂಠಿತವಾಗಿ ಜೋಳ ಖರೀದಿ ಸಾಧ್ಯವಾಗಿಲ್ಲ. ಹಾಗಾಗಿ ಮೊದಲಿನಂತೆಯೇ ಪಡಿತರ ನೀಡಲಾಗುತ್ತದೆ. ಅಂತ್ಯೋದಯ ಕಾರ್ಡ್ ದಾರರಿಗೆ 35 ಕೆಜಿ ಕೊಡಲಾಗುತ್ತಿದ್ದು, ಇನ್ನುಮುಂದೆ 15 ಕೆಜಿ ಅಕ್ಕಿ ಮತ್ತು 20 ಕೆಜಿ ರಾಗಿ ನೀಡಲಾಗುವುದು ಎನ್ನಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ