Breaking News
Home / ಜಿಲ್ಲೆ / ಬೆಂಗಳೂರು / ಉಪ ಚುನಾವಣೆಗೆ ನಾಳೆಯೇ ಮತದಾನ: ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತು

ಉಪ ಚುನಾವಣೆಗೆ ನಾಳೆಯೇ ಮತದಾನ: ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತು

Spread the love

ಬೆಂಗಳೂರು: ಬೆಳಗಾವಿ ಲೋಕಸಭೆ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಿನ್ನೆ ಸಂಜೆ ತೆರೆಬಿದ್ದಿದೆ.

ಇಂದು ಮನೆಮನೆ ಪ್ರಚಾರ ನಡೆಯಲಿದ್ದು, ಪ್ರಚಾರಕ್ಕೆ ಆಗಮಿಸಿದ್ದ ನಾಯಕರೆಲ್ಲ ಕ್ಷೇತ್ರದಿಂದ ಹೊರಗೆ ತೆರಳಿದ್ದಾರೆ. ಸ್ಥಳೀಯ ಕಾರ್ಯಕರ್ತರು ಮತದಾರರ ಮನವೊಲಿಕೆಗೆ ಅಂತಿಮಹಂತದ ಕಸರತ್ತು ನಡೆಸಿದ್ದಾರೆ. ಏಪ್ರಿಲ್ 17 ರಂದು ಉಪಚುನಾವಣೆಗೆ ಮತದಾನ ನಡೆಯಲಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಘಟಾನುಘಟಿ ನಾಯಕರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಉಪಚುನಾವಣೆಯಲ್ಲಿ ಪ್ರಮುಖ ಅಸ್ತ್ರವಾಗಬಲ್ಲದೆಂದು ಹೇಳಲಾಗಿದ್ದ ಸಿಡಿ ಪ್ರಕರಣ ಪ್ರಸ್ತಾಪವೇ ಆಗಿಲ್ಲ. ಆದರೆ ಅನೇಕ ವಿಚಾರಗಳಿಗೆ ನಾಯಕರ ನಡುವೆ ವಾಕ್ಸಮರವೇ ನಡೆದಿದೆ.

ತಮ್ಮ ಅಭ್ಯರ್ಥಿಗಳ ಪರವಾಗಿ ನಾಯಕರು ಪ್ರಚಾರ ನಡೆಸಿದ್ದು ಯಾರಿಗೆ ಗೆಲುವು ಸಿಗಲಿದೆ ಎನ್ನುವುದು ನಾಳೆ ನಿರ್ಧಾರವಾಗಲಿದೆ. ಉಪಚುನಾವಣೆ ದೊಡ್ಡಮಟ್ಟದ ಬದಲಾವಣೆಯನ್ನು ತರದಿದ್ದರೂ ರಾಜ್ಯರಾಜಕಾರಣದಲ್ಲಿ ಒಂದಿಷ್ಟು ಬೆಳವಣಿಗೆಗೆ ಕಾರಣವಾಗಬಹುದು. ಇದಕ್ಕಾಗಿ ಫಲಿತಾಂಶದವರೆಗೆ ಕಾಯಬೇಕಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ