Breaking News
Home / ಜಿಲ್ಲೆ / ಬೆಂಗಳೂರು / ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚ

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚ

Spread the love

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕೆ ಸರಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದರಂತೆ ರಾಜ್ಯದಲ್ಲಿ ನಡೆಸುವ ಸಾರ್ವಜನಿಕ ಸಮಾರಂಭಗಳು, ಆಚರಣೆಗಳು ಹಾಗೂ ಮನೋರಂಜನಾ ಕಾರ್ಯಕ್ರಮಗಳಿಗೆ ಹೆಚ್ಚಿನ ಮಿತಿಯನ್ನು ಹೇರಲಾಗಿದೆ. ಈ ಹೊಸ ಮಾರ್ಗಸೂಚಿಯು ಏಪ್ರಿಲ್ 30 ರ ವರೆಗೆ ಜಾರಿಯಲ್ಲಿರಲಿದೆ.

ಮಾರ್ಗಸೂಚಿಗಳು :
– ತೆರೆದ ಪ್ರದೇಶದಲ್ಲಿ ನಡೆಸುವ ಮದುವೆ ಕಾರ್ಯಕ್ರಮಗಳಲ್ಲಿ 200 ಮಂದಿಗೆ ಅವಕಾಶ ಕಲ್ಪಿಸಲಾಗಿದ್ದು, ಹಾಗೂ ಕಲ್ಯಾಣ ಮಂಟಪ, ಹಾಲ್ ಹಾಗೂ ಸಭಾಂಗಣಗಳಲ್ಲಿ ನಡೆಸುವ ಮದುವೆಗೆ 100 ಮಂದಿಗೆ ಅವಕಾಶ ಕಲ್ಪಿಸಲಾಗಿದೆ.
– ಹುಟ್ಟು ಹಬ್ಬ ಆಚರಣೆ ಹಾಗೂ ಇತರ ಸಂಭ್ರಮಾಚರಣೆಗಳಲ್ಲಿ ತೆರೆದ ಪ್ರದೇಶದಲ್ಲಿ 50 ಮಂದಿಗೆ ಹಾಗೂ ಸಭಾಂಗಣ ಮತ್ತು ಹಾಲ್ ಗಳಲ್ಲಿ 25 ಮಂದಿಗೆ ಅವಕಾಶ. – ನಿಧನರಾದವರ ಅಂತಿಮ ದರ್ಶನಕ್ಕೆ 50 ಜನರಿಗೆ ಮಾತ್ರ ಅವಕಾಶ, ಹಾಗೂ ಅಂತ್ಯಕ್ರೀಯೆಯಲ್ಲಿ ಭಾಗವಹಿಸಲು 25 ಮಂದಿಗೆ ಮಾತ್ರ ಅವಕಾಶ.
– ಇತರ ಸಮಾರಂಭಗಳಲ್ಲೂ 50 ಮಂದಿಯನ್ನು ಮೀರದಂತೆ ಕಾರ್ಯಕ್ರಮಗಳನ್ನು ನಡೆಸಲು ಮಿತಿ ಹೇರಲಾಗಿದೆ.

ಧಾರ್ಮಿಕ ಆಚರಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು ಕರ್ನಾಟಕ ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಆದೇಶ ಪ್ರಕಟಿಸಿದ್ದಾರೆ. ಈ ಆದೇಶವನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ