Breaking News

ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷರ ಮೇಲೆ ಹಲ್ಲೆ

Spread the love

ಹೊನ್ನಾಳಿ: ತಾಲ್ಲೂಕಿನ ಕುಂದೂರು ಗ್ರಾಮದ ಹೊರವಲಯದ ಮನೆಯೊಂದರ ಮೇಲೆ ಐದು ಜನರಿದ್ದ ದುಷ್ಕರ್ಮಿಗಳ ತಂಡ ಗುರುವಾರ ರಾತ್ರಿ ಕುಂದೂರು ಗ್ರಾಮದ ನಿವಾಸಿ, ಹೊನ್ನಾಳಿ ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಎಂಜಿಆರ್ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆಸಿದೆ.

ತೀವ್ರವಾಗಿ ಗಾಯಗೊಂಡಿರುವ ಅವರನ್ನು ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಂದೂರು ಗ್ರಾಮಕ್ಕೆ ಪಿಎಸ್‌ಐ ಬಸನಗೌಡ ಬಿರಾದಾರ ಅವರು ಭೇಟಿ ನೀಡಿ ಪರಿಶೀಲಿಸಿದರು.

ಈ ಸಂಬಂಧ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ‌. ತಪ್ಪಿಸಿಕೊಂಡಿರುವ ಇತರ ನಾಲ್ವರ ಬಂಧನಕ್ಕೆ ಹೊನ್ನಾಳಿ ಪೊಲೀಸರು ಬಲೆ ಬೀಸಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ