Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಬೆಳಗಾವಿ ಉಪಚುನಾವಣೆ : ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಮತದಾನ ಬಹಿಷ್ಕಾರ ಹಾಕಿದ ಗ್ರಾಮಸ್ಥರು

ಬೆಳಗಾವಿ ಉಪಚುನಾವಣೆ : ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಮತದಾನ ಬಹಿಷ್ಕಾರ ಹಾಕಿದ ಗ್ರಾಮಸ್ಥರು

Spread the love

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಶಾಂತಿಯುತವಾಗಿ ಆರಂಭವಾಗಿದ್ದು ಬೆಳಿಗ್ಗೆ 9 ಗಂಟೆಯವರೆಗೆ ಶೇ 5.47 ರಷ್ಟು ಮತದಾನವಾಗಿದೆ.

ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು ತಮ್ಮ ಕುಟುಂಬ ಸಮೇತ ಮತಗಟ್ಟೆಗೆ ಬಂದು ಸರದಿಯಲ್ಲಿ ನಿಂತು ಮತ ಚಲಾಯಿಸಿದರು. ಶಾಂತಿಯುತ ಮತದಾನವಾಗುತ್ತಿರುವ ಮಧ್ಯೆ ತಮ್ಮ ಹಳ್ಳಿಯ ಸ್ಥಳಾಂತರಕ್ಕೆ ಒತ್ತಾಯಿಸಿ ರಾಮದುರ್ಗ‌ ತಾಲೂಕಿನ ಪ್ರವಾಹ ಪೀಡಿತ ಚಿಕ್ಕತಡಸಿ ಹಾಗೂ ಹಿರೇತಡಸಿ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದ್ದಾರೆ.‌

ಗ್ರಾಮದ ಸ್ಥಳಾಂತರ ವಿಷಯದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ರಾಮದುರ್ಗ ತಾಲೂಕಿನ ಚಿಕ್ಕತಡಸಿ ಹಾಗೂ ಹಿರೇತಡಸಿ ಗ್ರಾಮಗಳ 2500 ಕ್ಕೂ ಅಧಿಕ ಮತದಾರರು ಮತದಾನ ಬಹಿಷ್ಕಾರ ಮಾಡಿದ್ದಾರೆ. ಕಳೆದ ವರ್ಷ ನೆರೆ ಪ್ರವಾಹದಲ್ಲಿ ತೊಂದರೆ ಒಳಗಾಗದ ಗ್ರಾಮಸ್ಥರು ಹಲವು ದಿನಗಳಿಂದ ಗ್ರಾಮವನ್ನು ಸ್ಥಳಾಂತರಿಸುವಂತೆ ಒತ್ತಾಯಿಸುತ್ತಿದ್ದರು.


Spread the love

About Laxminews 24x7

Check Also

ವನ್ಯಜೀವಿಗಳ ದಾಹ ತೀರಿಸುವ ಕೃತಕ ನೀರಿನ ತೊಟ್ಟಿಗಳು

Spread the loveಹಾನಗಲ್: ಕಡು ಬೇಸಿಗೆ ನಾಡಿನೆಲ್ಲೆಡೆ ಕುಡಿಯುವ ನೀರಿಗೆ ಅಭಾವ ಸೃಷ್ಟಿಸಿದೆ. ಕಾಡಿನಲ್ಲಿ ವನ್ಯ ಜೀವಿಗಳು ಅನುಭವಿಸುತ್ತಿರುವ ಸಂಕಷ್ಟ ಅರಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ