Breaking News

ಕಳೆದ 24 ಗಂಟೆಗಳಲ್ಲಿ 3 ಬಾರಿ ಆಮ್ಲಜನಕ ಪೂರೈಕೆಗೆ ಸರ್ಕಾರದಿಂದ ಆರ್ಡರ್

Spread the love

ನವದೆಹಲಿ, : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಆಮ್ಲಜನಕ ಪೂರೈಸಲು ಕೇಂದ್ರ ಸರ್ಕಾರವು ಕಳೆದ 24 ಗಂಟೆಗಳಲ್ಲಿ 3 ಬಾರಿ ಆರ್ಡರ್ ಮಾಡಿದೆ. ಕಳೆದ 10 ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ತೀವ್ರವಾಗುತ್ತಿದ್ದು, ಆಕ್ಸಿಜನ್ ಪೂರೈಕೆಯಿಲ್ಲದೆ ರೋಗಿಗಳು ಮೃತಪಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದೀಗ ಸರ್ಕಾರವು ಆಕ್ಸಿಜನ್ ಸಿಲಿಂಡರ್‌ಗಾಗಿ ಒಂದೇ ದಿನದಲ್ಲಿ ಮೂರು ಬಾರಿ ಆರ್ಡರ್ ಮಾಡಿದೆ. ದೇಶಾದ್ಯಂತ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ದರ್ಜೆಯ ಆಮ್ಲಜನಕ ಉತ್ಪಾದನೆ ಪೂರೈಕೆ ಹೆಚ್ಚಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಕೋವಿಡ್-19 ಏರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಸಮರ್ಪಕ ಆಮ್ಲಜನಕ ಸಾಧನಗಳ ಲಭ್ಯತೆಯ ಕುರಿತು ಏ.16 ರಂದು ಸಮಗ್ರ ಪರಿಶೀಲನೆ ನಡೆಸಿದರು.

ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರ ನಡುವೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ ಮಾಡುವ ಸಾಧನಗಳ ತಯಾರಿಕೆಯನ್ನು ಏರಿಕೆ ಮಾಡುವಂತೆ ಕರೆ ನೀಡಿದ್ದಾರೆ. ಸಮಗ್ರ ಪರಿಶೀಲನೆ ವೇಳೆ ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ, ಸ್ಟೀಲ್, ರಸ್ತೆ ಸಾರಿಗೆ ಕೈಗಾರಿಕಾ, ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಗಳಿಂದ ಮಾಹಿತಿಯನ್ನು ಪಡೆದಿದ್ದಾರೆ ಎಂದು ಪಿಎಂಒ ಮಾಹಿತಿ ನೀಡಿದೆ. ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡುವ ಪ್ರಕ್ರಿಯೆಯಲ್ಲಿ ಆಮ್ಲಜನಕ ಪೂರೈಕೆ ಸಾಧನ ಪ್ರಮುಖ ಪಾತ್ರ ವಹಿಸಲಿವೆ. ಈ ಕಾರಣದಿಂದಾಗಿ ಉತ್ಪಾದನೆ ಹೆಚ್ಚಿಸುವಂತೆ ಪ್ರಧಾನಿಗಳು ಕರೆ ನೀಡಿದ್ದಾರೆ ಎಂದು ಪಿಎಂಒ ತಿಳಿಸಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ