Breaking News

ಮೂರು ಕ್ಷೇತ್ರಗಳ ಉಪಚುನಾವಣೆ, ಶಾಂತಿಯುತ ಮತದಾನ

Spread the love

ಏಪ್ರಿಲ್ 17ರಂದು ಕರ್ನಾಟಕದ ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ಆರಂಭವಾಗಿದೆ.

ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದರೆ, ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರ ನಿಧನದಿಂದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ.

ಇನ್ನು ಕಳೆದ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲರು ತಮ್ಮ ವಿಧಾನಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ ಮಸ್ಕಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದೆ.

ಬೆಳಗಾವಿ ಲೋಕಸಭೆ ಉಪ ಚುನಾವಣಾ ಕಣದಲ್ಲಿ ಬಿಜೆಪಿಯಿಂದ ದಿ.ಸುರೇಶ್ ಅಂಗಡಿ ಅವರ ಪತ್ನಿ ಮಂಗಲ ಸುರೇಶ್ ಅಂಗಡಿ ಅವರು ಸ್ಪರ್ಧಿಸಿದ್ದರೆ, ಕಾಂಗ್ರೆಸ್ ಪಕ್ಷದಿಂದ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಸ್ಪರ್ಧಿಸಿದ್ದಾರೆ. ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಶರಣು ಸಲಗರ ಸ್ಪರ್ಧಿಸಿದ್ದರೆ, ಕಾಂಗ್ರೆಸ್ ಪಕ್ಷದಿಂದ ಬಿ.ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಬಿ.ನಾರಾಯಣರಾವ್ ಸ್ಪರ್ಧಿಸಿದ್ದಾರೆ. ಜೆಡಿಎಸ್ ಪಕ್ಷದಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ ಚುನಾವಣಾ ಕಣದಲ್ಲಿದ್ದರೆ, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖೂಬಾ ಆಖಾಡಕ್ಕಿಳಿದಿದ್ದಾರೆ.

ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭೆ ಉಪ ಚುನಾವಣಾ ಕಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪಗೌಡ ಪಾಟೀಲ್ ಸ್ಪರ್ಧಿಸಿದ್ದು, ಕಾಂಗ್ರೆಸ್ ಪಕ್ಷದಿಂದ ಬಸನಗೌಡ ತುರವಿಹಾಳ ಸ್ಪರ್ಧಿಸಿದ್ದಾರೆ. ಇಲ್ಲಿ ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

ಈ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಮೇ 02 ರಂದು ಪ್ರಕಟವಾಗಲಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ