Breaking News

ಬೆಳಗಾವಿಗೆ ಕೊರೊನಾ ಆತಂಕ ಶುರು ಇಂದು ಬರಲಿದೆ 500 ಜನರ ವರದಿ

Spread the love

ಬೆಳಗಾವಿ: ಉಪಚುನಾವಣೆ ಮುಗಿದ ಬೆನ್ನಲ್ಲೇ ಗಡಿಜಿಲ್ಲೆ ಬೆಳಗಾವಿಗೆ ಕೊರೊನಾ ಆತಂಕ ಶುರುವಾಗಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪನವರ ಸಂಪರ್ಕದಲ್ಲಿದ್ದವರ ಕೋವಿಡ್ ಟೆಸ್ಟ್ ವರದಿ ಇಂದು ಬರಲಿದೆ.

ಉಪಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಕೆಲ ದಿನಗಳಿಂದ ಸಿಎಂ ಸಂಪರ್ಕದಲ್ಲಿದ್ದವರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

ಬೆಳಗಾವಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಸಿಎಂ ಸಂಪರ್ಕಕ್ಕೆ ಬಂದ 500 ಜನರ ಗಂಟಲು ಧ್ರವ ಸಂಗ್ರಹಿಸಿ ಲ್ಯಾಬ್ ಗೆ ಕಳುಹಿಸಲಾಗಿದ್ದು, ಇಂದು ಸಂಜೆ ವೇಳೆಗೆ ವರದಿ ಬರಲಿದೆ. ಈ ಹಿನ್ನೆಲೆಯಲ್ಲಿ ಕುಂದಾ ನಗರಿ ಬೆಳಗಾವಿಯಲ್ಲಿ ಆತಂಕ ಎದುರಾಗಿದೆ.

https://youtu.be/wtSHt9vYZZY

 


Spread the love

About Laxminews 24x7

Check Also

ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆ

Spread the love ಬೆಳಗಾವಿಯಲ್ಲಿ ಡಿ.8ರಿಂದ ನಡೆಯಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ಸಮಿತಿ ಹಾಗೂ ಉಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ