Breaking News
Home / ರಾಜ್ಯ / ನಾಳೆ ಬೆಂಗಳೂರಿಗರಿಗೆ ಕಾದಿದೆ ‘ಲಾಕ್’ ಶಾಕ್..!

ನಾಳೆ ಬೆಂಗಳೂರಿಗರಿಗೆ ಕಾದಿದೆ ‘ಲಾಕ್’ ಶಾಕ್..!

Spread the love

ಬೆಂಗಳೂರು,ಏ.18- ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಡಿವಾಣ ಹಾಕುವ ಕಾರಣಕ್ಕಾಗಿ ನಾಳೆಯ ಸಭೆಯ ಬಳಿಕ ಪ್ರತ್ಯೇಕ ಮಾರ್ಗಸೂಚಿಯನ್ನು ಜಾರಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಈ ಮೂಲಕ ಬೆಂಗಳೂರಿನಲ್ಲಿ ಲಾಕ್‍ಡೌನ್, ಸೆಮಿಲಾಕ್ ಡೌನ್ ಇಲ್ಲವೇ ವಾರಂತ್ಯದ ಲಾಕ್‍ಡೌನ್ (ವೀಕ್ ಎಂಡ್) ಜಾರಿಯಾಗುವುದು ಬಹುತೇಕ ಖಚಿತ ಎಂಬ ಸುಳಿವನ್ನು ಪರೋಕ್ಷವಾಗಿ ನೀಡಿದ್ದಾರೆ.

ಕೊರೊನಾ ಪಾಸಿಟಿವ್ ಹಿನ್ನಲೆಯಲ್ಲಿ ಮಣಿಪಾಲ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾಳೆ ಕಂದಾಯ ಸಚಿವ ಆರ್ .ಆಶೋಕ್ ಹಾಗೂ ಬೆಂಗಳೂರು ಪ್ರತಿನಿಸುವ ಜನಪ್ರತಿನಿಗಳ ಸಭೆ ನಡೆಯಲಿದೆ ಎಂದು ಹೇಳಿದರು.

ಸಭೆಯಲ್ಲಿ ಪ್ರಮುಖವಾಗಿ ಸೋಕು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಎಲ್ಲರ ಅಭಿಪ್ರಾಯವನ್ನು ಪಡೆಯಲಾಗುವುದು. ಕಠಿಣ ಕ್ರಮಗಳನ್ನು ಅನುಷ್ಠಾನ ಮಾಡಲು ರಾಜಧಾನಿಗಾಗಿಯೇ ಪ್ರತ್ಯೇಕ ಮಾರ್ಗಸೂಚಿಯನ್ನು ಜಾರಿ ಮಾಡಲಿದ್ದೇವೆ ಎಂದರು.

ಯಾವುದೇ ತೀರ್ಮಾನವನ್ನು ಕೈಗೊಳ್ಳುವ ಮುನ್ನ ಎಲ್ಲರ ಅಭಿಪ್ರಾಯ ಪಡೆಯಬೇಕು. ಹೀಗಾಗಿ ಜನಪ್ರತಿನಿಗಳ ಅಭಿಪ್ರಾಯವನ್ನು ಪಡೆಯಲಿದ್ದೇವೆ. ವಿಪಕ್ಷದವರ ಸಲಹೆಯನ್ನೂ ಪಡೆಯಲಿದ್ದೇವೆ ಎಂದು ಹೇಳಿದರು. ಮುಖ್ಯಮಂತ್ರಿಯವರು ಕೆಲವು ಕಠಿಣ ನಿಯಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ಕೊಟ್ಟಿದ್ದಾರೆ. ಲಾಕ್‍ಡೌನ್ ಬಿಟ್ಟು ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವಂತೆ ಸೂಚನೆ ಕೊಟ್ಟಿದ್ದಾರೆ. ಈ ಎಲ್ಲ ಸಾಧಕಬಾಧಕಗಳ ಬಗ್ಗೆಯೂ ಚರ್ಚೆ ಮಾಡುವುದಾಗಿ ತಿಳಿಸಿದರು.

ಮುಖ್ಯಮಂತ್ರಿಯವರ ಆರೋಗ್ಯ ಸ್ಥಿತಿ ತುಂಬ ಸುಧಾರಣೆ ಕಂಡಿದೆ. ನುರಿತ ವೈದ್ಯರು ಅವರಿಗೆ ಏನೇನು ಬೇಕೋ ಅವುಗಳನ್ನು ಪೂರೈಸಿದ್ದಾರೆ. ಪ್ರಸಕ್ತ ವಿದ್ಯಮಾನಗಳ ಬಗ್ಗೆಯೂ ನನ್ನಿಂದ ಮಾಹಿತಿ ಪಡೆದರು. ವೈದ್ಯರು ಯಾವಾಗ ಡಿಸ್ಚಾರ್ಜ್ ಮಾಡುತ್ತಾರೆ ಎಂಬ ಮಾಹಿತಿ ಇಲ್ಲ. ಆದರೆ ಅವರ ಆರೋಗ್ಯದ ಬಗ್ಗೆ ಯಾರಿಗೂ ಆತಂಕ ಬೇಡ ಎಂದು ಸುಧಾಕರ್ ಹೇಳಿದರು.


Spread the love

About Laxminews 24x7

Check Also

ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ.: ಲಕ್ಷ್ಮೀ ಹೆಬ್ಬಾಳ್ಕರ್

Spread the love ಬೆಳಗಾವಿ: ರಾಜ್ಯದ ರಾಜಕಾರಣ, ದೇಶದ ರಾಜಕಾರಣ ತಲೆ ತಗ್ಗಿಸುವ ಘಟನೆಯಿದು. ನಾಗರಿಕ ಸಮಾಜ ತಲೆ ತಗ್ಗಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ