ಮಡಿಕೇರಿ ; ಇಲ್ಲಿಗೆ ಸಮೀಪದ ಸೋಮವಾರಪೇಟೆ ತಾಲ್ಲೂಕಿನ ಮಲ್ಲಳ್ಳಿ ಜಲಪಾತಕ್ಕೆ ಬಿದ್ದು ಇಬ್ಬರು ದಾರುಣವಾಗಿ ಸಾವಿಗೀಡಾಗಿದ್ದಾರೆ. ಮೃತರನ್ನು ಶಶಿಕುಮಾರ್ (32) ಮತ್ತು ದಿವ್ಯ (20) ಎಂದು ಗುರುತಿಸಲಾಗಿದೆ. ಮೃತ ಶಶಿ ಕುಮಾರ್ ಸುಂಟಿಕೊಪ್ಪದ ಗುತ್ತಿಗೆದಾರ ರಾಮ ಎಂಬುವವರ ಪುತ್ರನಾಗಿದ್ದು ಅನೇಕ ವರ್ಷಗಳಿಂದ ಬೆಂಗಳೂರಿನ ಕಂಪೆನಿಯಲ್ಲಿ ಕೆಲಸ ಮಾಡುತಿದ್ದ.
ಯುವತಿ ದಿವ್ಯಾ ಕೂಡ ಸುಂಟಿಕೊಪ್ಪದವಳೇ ಆಗಿದ್ದಾಳೆ
ಸೋಮವಾರಪೇಟೆ ತಾಲೂಕಿನ ಮಲ್ಲಳ್ಲಿ ಜಲಪಾತದಲ್ಲಿ ಇಂದು ಬೆಳಗ್ಗೆ 9.30 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ವೀಕೆಂಡ್ ಹಿನ್ನೆಲೆಯಲ್ಲಿ ಆರು ಜನರ ತಂಡ ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದರು. ಆಗ ಆಕಸ್ಮಿಕವಾಗಿ ಜಲಪಾತದ ಕೆಳಗೆ ಬೀಳುತ್ತಿದ್ದ ದಿವ್ಯಾಳನ್ನು ರಕ್ಷಿಸಲು ಹೋಗಿ ಶಶಿಕುಮಾರ್ ಸಹ ಮೃತಪಟ್ಟಿದ್ದಾರೆ. ಅನಿರೀಕ್ಷಿತ ಸಾವಿನಿಂದ ಎರಡು ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ದೇಹಗಳನ್ನು ನೀರಿನಿಂದ ಹೊರತೆಗೆಯಲು ಮುಳುಗು ತಜ್ಞರು ಹಾಗೂ ಗ್ರಾಮಸ್ಥರು ಶ್ರಮಿಸುತಿದ್ದಾರೆ. ಘಟನಾ ಸ್ಥಳಕ್ಕೆ ಸೋಮವಾರಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Laxmi News 24×7