Breaking News
Home / ರಾಜಕೀಯ / ಕೇಂದ್ರ ಸರ್ಕಾರದಿಂದ ಆರೋಗ್ಯ ಕಾರ್ಯಕರ್ತರಿಗೆ ಬಿಗ್ ಶಾಕ್ : 50 ಲಕ್ಷ ರೂ. ವಿಮೆ ಸೌಲಭ್ಯ ರದ್ದು!

ಕೇಂದ್ರ ಸರ್ಕಾರದಿಂದ ಆರೋಗ್ಯ ಕಾರ್ಯಕರ್ತರಿಗೆ ಬಿಗ್ ಶಾಕ್ : 50 ಲಕ್ಷ ರೂ. ವಿಮೆ ಸೌಲಭ್ಯ ರದ್ದು!

Spread the love

ನವದೆಹಲಿ : ಕೇಂದ್ರ ಸರ್ಕಾರವು ಆರೋಗ್ಯ ಕಾರ್ಯಕರ್ತರಿಗೆ ಬಿಗ್ ಶಾಕ್ ನೀಡಿದ್ದು, ಕೊರೊನಾ ಸೋಂಕಿತರ ಆರೈಕೆ ಸಂದರ್ಭದಲ್ಲಿ ಮೃತಪಟ್ಟ ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ 50 ಲಕ್ಷ ರೂ. ವಿಮೆ ಸೌಲಭ್ಯವನ್ನು ಕೇಂದ್ರ ಸರ್ಕಾರ ಹಿಂಪಡೆದುಕೊಂಡಿದೆ.

ಈ ಕುರಿತು ಎಲ್ಲಾ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣೆ ಪತ್ರ ಬರೆದಿದ್ದು, 2020 ರ ಮಾರ್ಚ್ 20 ರಂದು ಘೋಷಣೆಯಾಗಿದ್ದ ಕೊರೊನಾ ಸೋಂಕಿತರ ಆರೈಕೆ ಸಂದರ್ಭದಲ್ಲಿ ಮೃತಪಟ್ಟ ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ 50 ಲಕ್ಷ ರೂ. ವಿಮೆ ಸೌಲಭ್ಯವನ್ನು 2021 ರ ಮಾರ್ಚ್ 24 ರಂದು ಅಂತ್ಯವಾಗಿದ್ದು, ಈ ದಿನಾಂಕಕ್ಕೆ ಮೊದಲು ಮೃತಪಟ್ಟ ಆರೋಗ್ಯ ಕಾರ್ಯಕರ್ತರ ಕುಟುಂಬಗಳು ಸೌಲಭ್ಯ ಪಡೆಯಲು ಒಂದು ತಿಂಗಳು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಈವರೆಗೆ ಒಟ್ಟು 287 ಕುಟುಂಬಗಳಿಗೆ ವಿಮೆ ಹಣ ನೀಡಲಾಗಿದ್ದು, ಮಾರ್ಚ್ 24 ಕ್ಕೆ ಮೊದಲು ಮೃತಪಟ್ಟ ಆರೋಗ್ಯ ಕಾರ್ಯಕರ್ತರ ಕುಟುಂಬಗಳು ಸೌಲಭ್ಯ ಪಡೆಯಲು ಕೇಂದ್ರದಿಂದ ಒಂದು ತಿಂಗಳು ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the loveಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ