Breaking News

ವೆಂಟಿಲೇಟರ್ ಸಿಗದೆ ಸಚಿವರ ಪಿಎ ಕೊರೆನಾಗೆ ಬಲಿ

Spread the love

ಬೆಂಗಳೂರು – ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪರಿಸ್ಥಿತಿ ಗಂಭೀರವಾಗುತ್ತಿದೆ. ಇಂದು ಶಿಕ್ಷಣ ಸಚಿವ ಸುರೇಶ ಕುಮಾರ ಅವರ ಪಿಎ ರಮೇಶ್ ಕೊರೋನಾದಿಂದ ಬಲಿಯಾಗಿದ್ದಾರೆ.

ರಮೇಶ ಒಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಪರಿಸ್ಥಿತಿ ಗಂಭೀರವಾದರೂ ವೆಂಟಿಲೇಟರ್ ಸಿಗದೆ ಸಾವನ್ನಪ್ಪಿದ್ದಾರೆ. ರಮೇಶ 8 ವರ್ಷದಿಂದ ಸಚಿವರ ಜೊತೆ ಕೆಲಸ ಮಾಡುತ್ತಿದ್ದರು. ಅವರಿಗೆ 55 ವರ್ಷ ವಯಸ್ಸಾಗಿತ್ತು.

ಸಚಿವರ ಪಿಎಗೇ ವೆಂಟಿಲೇಟರ್ ಸಿಗದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ