Breaking News
Home / ರಾಜ್ಯ / ಆರೋಗ್ಯ ಕ್ಷೇತ್ರಕ್ಕೆ ₹30 ಸಾವಿರ ಕೋಟಿ ಮೀಸಲಿಡಬೇಕು : ಡಿ.ಕೆ. ಶಿವಕುಮಾರ್

ಆರೋಗ್ಯ ಕ್ಷೇತ್ರಕ್ಕೆ ₹30 ಸಾವಿರ ಕೋಟಿ ಮೀಸಲಿಡಬೇಕು : ಡಿ.ಕೆ. ಶಿವಕುಮಾರ್

Spread the love

ಬೆಂಗಳೂರು : ಕೊರೋನಾ ಎರಡನೇ ಅಲೆ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರುಪಾಯಿ ಮೀಸಲಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ದಿನೇ ದಿನೇ ಗಂಭೀರವಾಗುತ್ತಿದೆ. ಸೋಂಕಿತರಿಗೆ ಬೆಡ್ ಗಳು ಸಿಗುತ್ತಿಲ್ಲ. ಐಸಿಯು, ರೆಮ್ ಡಿಸಿವಿಯರ್ ಲಸಿಕೆ, ಆಮ್ಲಜನಕ ಅಭಾವ ಸೃಷ್ಟಿಯಾಗಿವೆ. ಪ್ರತಿ ವಿಚಾರದಲ್ಲೂ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಸರ್ಕಾರ ಕೂಡಲೇ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿ, ಆ ಹಣವನ್ನು ಕೊರೋನಾ ನಿಯಂತ್ರಣಕ್ಕೆ ವಿನಿಯೋಗಿಸಬೇಕು. ಸಮರೋಪಾದಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಅತಿ ಹೆಚ್ಚು ವೈದ್ಯಕೀಯ ಕಾಲೇಜುಗಳಿವೆ. ಸಾಕಷ್ಟು ಪ್ರಮಾಣದಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿಗಳಿದ್ದಾರೆ. ಈ ಎಲ್ಲ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಪ್ರತಿಯೊಬ್ಬರಿಗೂ ಉಚಿತ ಚಿಕಿತ್ಸೆ ಸಿಗುವಂತಾಗಬೇಕು. ಪರೀಕ್ಷೆ ಪ್ರಮಾಣ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಕನಿಷ್ಠ ಪಕ್ಷ ₹ 30 ಸಾವಿರ ಕೋಟಿಯನ್ನಾದರೂ ಮೀಸಲಿಡಬೇಕು ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ನಮ್ಮದು ಮೊಘಲ್ ಸರ್ಕಾರವಲ್ಲ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್‌ ಚಾಟಿ

Spread the love ಬೆಂಗಳೂರು: ‘ನಮ್ಮದು ಜನರ ಕಲ್ಯಾಣಕ್ಕಾಗಿ ಶ್ರಮಿಸುವ ಆಡಳಿತ ವ್ಯವಸ್ಥೆ ಎಂಬುದನ್ನು ಮರೆಯಬೇಡಿ. ಇದು ಮೊಘಲರ ಸರ್ಕಾರವಲ್ಲ’ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ