Breaking News

ನಮಗಿದು ತುಂಬಾ ಭಯಾನಕ ಸಮಯ; ಆತಂಕ ವ್ಯಕ್ತಪಡಿಸಿದ್ದೇಕೆ ನಟ ಅರ್ಜುನ್ ರಾಂಪಾಲ್

Spread the love

ಬಾಲಿವುಡ್ ಖ್ಯಾತ ನಟ ಅರ್ಜುನ್ ರಾಂಪಾಲ್ ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಅರ್ಜುನ್ ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಾಲಿವುಡ್ ನ ಬಹುತೇಕ ಕಲಾವಿದರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕೊರೊನಾ ಎರಡನೇ ಅಲೆ ದೇಶದಲ್ಲಿ ಮತ್ತೆ ಆತಂಕ ಸೃಷ್ಟಿಸಿದೆ.

ನಟ ಸೋನು ಸೂದ್ ಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ನಟ ಅರ್ಜುನ್ ರಾಂಪಾಲ್ ಕೊರೊನಾ ವೈರಸ್ ಗೆ ತುತ್ತಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿರುವ ಅರ್ಜುನ್ ಈಗಿನ ಸ್ಥಿತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

 

‘ನನಗೆ ಕೊರೊನಾ ಪಾಸಿಟಿವ್ ಬಂದಿದೆ. ನಾನು ಕ್ವಾರಂಟೈನ್ ನಲ್ಲಿದ್ದೇನೆ. ಅಗತ್ಯ ವೈದ್ಯಕೀಯ ಸೇವೆ ಪಡೆದಿದ್ದೇನೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ. ದಯವಿಟ್ಟು ಎಲ್ಲರೂ ಕಾಳಜಿ ವಹಿಸಿ, ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳು. ಇದು ನಮಗೆ ಭಯಾನಕ ಸಮಯವಾಗಿದೆ. ಆದರೆ ಜಾಗೃತರಾಗಿದ್ದರೆ ದೀರ್ಘಕಾಲಿನ ಪ್ರಯೋಜನ ನೀಡುತ್ತೆ. ನಾವು ಕೊರೊನಾ ವಿರುದ್ಧ ಹೋರಾಡೋಣ’ ಎಂದು ಹೇಳಿದ್ದಾರೆ.

ಬಾಲಿವುಡ್ ನಲ್ಲಿ ಸಾಕಷ್ಟು ಮಂದಿ ಕೊರೊನಾ ವೈರಸ್ ಗೆ ತುತ್ತಾಗಿದ್ದಾರೆ. ಅಲಿಯಾ ಭಟ್, ಕತ್ರಿನಾ ಕೈಫ್, ರಣಬೀರ್ ಕಪೂರ್, ಭೂಮಿ ಪಡ್ನೇಕರ್, ಸೋನು ಸೂದ್ ಸೇರಿದಂತೆ ಇನ್ನು ಅನೇಕರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅರ್ಜುನ್ ರಾಂಪಾಲ್ ಕೊನೆಯದಾಗಿ ನೈಲ್ ಪೋಲೀಷ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚಿಗಷ್ಟೆ ದಿ ರೇಪಿಸ್ಟ್ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಈ ಸಿನಿಮಾದಲ್ಲಿ ನಟಿ ಕೊಂಕಣ ಸೇನ್ ಶರ್ಮ ಕೂಡ ನಟಿಸಿದ್ದಾರೆ. ಇನ್ನು ನಟಿ ಕಂಗನಾ ನಟನೆಯ ಧಾಕಡ್ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.


Spread the love

About Laxminews 24x7

Check Also

ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

Spread the love ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್.. ರಾಣಾ-ಪ್ರಿಯಾಂಕಾ ಜೋಡಿಯ ಏಳುಮಲೆ ಸಿನಿಮಾದ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ