ಬೆಳಗಾವಿ: ಹೊರಗಡೆಯಿಂದ ಬಂದು ವಾರಕ್ಕಿಂತ ಹೆಚ್ಚು ಕಾಲ ಇಲ್ಲಿಯೇ ವಾಸಿಸುವ ನಾಗರಿಕರು ಅಥವಾ ಕುಟುಂಬಗಳು ಸ್ವಯಂಪ್ರೇರಣೆಯಿಂದ ತಮ್ಮ ಸಮೀಪದ ತಾಲ್ಲೂಕು ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.
ಕೋವಿಡ್ ಸೋಂಕು ಕೆಲವೆಡೆ ವ್ಯಾಪಕವಾಗಿ ಹರಡುತ್ತಿರುವುದರಿಂದ ತಮ್ಮ ಕುಟುಂಬ ಹಾಗೂ ಸಮಾಜದ ಆರೋಗ್ಯದ ದೃಷ್ಟಿಯಿಂದ ನಾಗರಿಕರು ಸ್ವಯಂಪ್ರೇರಣೆಯಿಂದ ತಪಾಸಣೆ ಮಾಡಿಕೊಳ್ಳಬೇಕು.
ಒಂದು ವೇಳೆ ಸೋಂಕು ಕಂಡುಬಂದರೆ ಸಕಾಲಕ್ಕೆ ಸೂಕ್ತ ಚಿಕಿತ್ಸೆ ಪಡೆಯಲು ಮತ್ತು ಕುಟುಂಬ ಹಾಗೂ ಇತರರಿಗೆ ಸೋಂಕು ಹರಡದಂತೆ ತಡೆಯಲು ಸಹಕಾರಿಯಾಗಲಿದೆ.
ಆದ್ದರಿಂದ ಪ್ರಸ್ತುತ ಸನ್ನಿವೇಶದಲ್ಲಿ ಇಲ್ಲಿಗೆ ಆಗಮಿಸಿ ಒಂದು ವಾರಕ್ಕಿಂತ ಹೆಚ್ಚು ಕಾಲ ಉಳಿದುಕೊಳ್ಳುವವರು ಕೋವಿಡ್-19 ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ.
ಸ್ವಯಂಪ್ರೇರಣೆಯಿಂದ ತಪಾಸಣೆಗೆ ಮುಂದಾಗುವ ಜನರಿಗೆ ಕೋವಿಡ್-19 ತಪಾಸಣೆಗೆ ಆರೋಗ್ಯ ಇಲಾಖೆಯಿಂದ ಎಲ್ಲ ರೀತಿಯ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.
ಹೀಗೆ ತಪಾಸಣೆಗೆ ಆಗಮಿಸುವವರಿಗೆ ಸರಕಾರದ ಮಾರ್ಗಸೂಚಿ ಪ್ರಕಾರ ತಪಾಸಣೆ ನಡೆಸಿ ತಕ್ಷಣವೇ ವರದಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Laxmi News 24×7