ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ನಿಯಂತ್ರಿಸಿಲು ಸರ್ಕಾರ ಪರದಾಡುತ್ತಿದ್ದು, ಕೋವಿಡ್ ವಿಚಾರದಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶ ಮಾಡಿದ್ದಾರೆ.
ಕೊರೊನಾ ನಿಯಂತ್ರಣ ಕ್ರಮಗಳ ಬಗ್ಗೆ ರಾಜ್ಯಪಾಲ ವಜುಭಾಯಿ ವಾಲ ಅವರ ನೇತೃತ್ವದಲ್ಲಿ ಇಂದು ಸಂಜೆ 4.30ಕ್ಕೆ ಸರ್ವಪಕ್ಷಗಳ ಸಭೆ ನಡೆಯಲಿದೆ.
ಇಂದಿನ ವರ್ಚುವಲ್ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ್, ಆರೋಗ್ಯ ಸಚಿವ ಕೆ.ಸುಧಾಕರ್, ಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವ ಆರ್.ಆರ್.ಅಶೋಕ್ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಲಿದ್ದಾರೆ.
Laxmi News 24×7