Breaking News

ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ : ರಾಜ್ಯಾಧ್ಯಂತ 12 ಗಂಟೆಯ ವೇಳೆ ಸಂಚಾರ ಆರಂಭಿಸಿದ ಸಾರಿಗೆ ಬಸ್ ಎಷ್ಟು ಗೊತ್ತಾ.?

Spread the love

ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ 14ನೇ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ನೌಕರರ ಮುಷ್ಕರದ ನಡುವೆಯೂ, ನಿಧಾನ ಗತಿಯಲ್ಲಿ ಸಾರಿಗೆ ಬಸ್ ಸಂಚಾರ ಆರಂಭಗೊಳ್ಳುತ್ತಿದೆ. ಇಂದು ಮಧ್ಯಾಹ್ನ 12 ಗಂಟೆಯ ವೇಳೆ ರಾಜ್ಯಾಧ್ಯಂತ 5,629 ಸಾರಿಗೆ ಬಸ್ ಸಂಚಾರ ಆರಂಭಿಸಿವೆ.

ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಹಿತಿ ನೀಡಿದ್ದು, ಇಂದು ಮಧ್ಯಾಹ್ನ 12 ಗಂಟೆಯವರೆಗೆ ರಾಜ್ಯಾಧ್ಯಂತ KSRTC 2340 ಬಸ್, BMTC 1159 ಬಸ್, NEKRTC 1044 ಬಸ್, NWKRTC 1086 ಬಸ್ ಸೇರಿದಂತೆ ಒಟ್ಟು 5,629 ಸಾರಿಗೆ ಬಸ್ ಗಳು ಸಂಚಾರ ಆರಂಭಿಸಿರುವುದಾಗಿ ತಿಳಿಸಿದೆ.

ಅಂದಹಾಗೇ, ಇಂದು ರಾಜ್ಯದಲ್ಲಿ ಕೊರೋನಾ ಕಂಟ್ರೋಲ್ ಗಾಗಿ ಸರ್ವಪಕ್ಷಗಳ ಸಭೆ, ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆಯಲಿದೆ. 4.30ಕ್ಕೆ ನಡೆಯಲಿರುವಂತ ಸರ್ವ ಪಕ್ಷ ಸಭೆ, ಮಹತ್ವದಿಂದ ಕೂಡಿದ್ದು, ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಕಠಿಣ ರೂಲ್ಸ್ ಜಾರಿಗೆ ತರಲಾಗುತ್ತಿದೆ ಎನ್ನಲಾಗುತ್ತಿದೆ. ಸರ್ವಪಕ್ಷ ಸಭೆಯ ಬಳಿಕ ಏನೆಲ್ಲಾ ಕಠಿಣ ನಿಯಮ ಜಾರಿಗೊಳ್ಳಲಿದೆ ಎನ್ನುವ ಬಗ್ಗೆ ಕಾದು ನೋಡಬೇಕಿದೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ