Breaking News

ವಿನಯ್ ರಾಜ್ ಕುಮಾರ್ ಹೊಸ ಸಿನಿಮಾಗೆ ನಾಯಕಿಯಾದ ಕಾಜಲ್

Spread the love

ಸ್ಯಾಂಡಲ್ ವುಡ್ ನಟ ವಿಜಯ್ ರಾಜ್ ಕುಮಾರ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅನಂತು ವರ್ಸಸ್ ನುರ್ಸತ್ ಸಿನಿಮಾ ಬಳಿಕ ವಿನಯ್ ರಾಜ್ ಕುಮಾರ್ ಮತ್ತೆ ತೆರೆಮೇಲೆ ಬಂದಿಲ್ಲ. ಇದೀಗ ಹೊಸ ಸಿನಿಮಾ ಮೂಲಕ ಮತ್ತೆ ಸದ್ದು ಮಾಡುತ್ತಿದ್ದಾರೆ.

ವಿನಯ್ ರಾಜ್ ಕುಮಾರ್ ಹೊಸ ಸಿನಿಮಾಗೆ ಪೆಪೆ ಎಂದು ಹೆಸರಿಡಲಾಗಿದೆ. ಚಿತ್ರದಲ್ಲಿ ವಿನಯ್ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಆಕ್ಷನ್ ಸಿನಿಮಾದಲ್ಲಿ ನಟಿಸುತ್ತಿದ್ದು, ಫಸ್ಟ್ ಲುಕ್‌ನಲ್ಲಿ ಲಾಂಗ್ ಹಿಡಿದು ರಕ್ತಸಿಕ್ತವಾಗಿ ಕಾಣಿಸಿಕೊಂಡಿದ್ದಾರೆ.

 

ಮೊದಲ ಬಾರಿಗೆ ವಿನಯ್ ರಾಜ್ ಕುಮಾರ್ ಅವರನ್ನು ಈ ಅವತಾರದಲ್ಲಿ ನೋಡಿ ಅಭಿಮಾನಿಗಳು ಅಚ್ಚರಿ ಪಟ್ಟಿದ್ದಾರೆ. ವಿಶೇಷ ಎಂದರೆ ಈ ಸಿನಿಮಾಗೆ ಈಗ ನಾಯಕಿ ಫಿಕ್ಸ್ ಆಗಿದ್ದಾರೆ. ವಿನಯ್ ಗೆ ನಾಯಕಿಯಾಗಿ ಕಾಜಲ್ ಆಯ್ಕೆಯಾಗಿದ್ದಾರೆ. ಅಂದಹಾಗೆ ಕಾಜಲ್ ಅಂದಮಾತ್ರಕ್ಕೆ ತೆಲುಗು ನಟಿ ಕಾಜಲ್ ಅಂತ ಭಾವಿಸಬೇಡಿ. ಕನ್ನಡದ ನಟಿ ಕಾಜಲ್.

ಈಗಾಗಲೇ ತುಳು ಮತ್ತು ಮರಾಠಿ ಸಿನಿಮಾಗಳಲ್ಲಿ ಮಿಂಚಿರುವ ಕಾಜಲ್ ಮಾಯಾ ಕನ್ನಡಿ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಸದ್ಯ ವಿನಯ್ ರಾಜ್ ಕುಮಾರ್ ನಟನೆಯ ಪೆಪೆ ಸಿನಿಮಾದ ಜೊತೆಗೆ ದಿಯಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ನಟನೆಯ ಕೆಟಿಎಂ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.

ಪೆಪೆ ಸಿನಿಮಾಗೆ ಉದಯ್ ಶಂಕರ್ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಫಸ್ಟ್ ಲುಕ್ ಮೂಲಕ ಸದ್ದು ಮಾಡುತ್ತಿರುವ ಸಿನಿಮಾತಂಡ ಟೀಸರ್ ಬಿಡುಗಡೆಗೆ ಕಾಯುತ್ತಿದ್ದಾರೆ. ಕಳೆದ ಎಲ್ಲಾ ಸಿನಿಮಾಗಳಿಂತ ವಿಭಿನ್ನವಾಗಿ ಕಾಣಿಸಿಕೊಂಡಿರುವ ವಿನಯ್ ರಾಜ್ ಕುಮಾರ್ ಪೆಪೆ ಹೇಗಿರಲಿದೆ ಎನ್ನುವುದು ಅಭಿಮಾನಿಗಳ ಕುತೂಹಲ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ