Home / ಜಿಲ್ಲೆ / ಬೆಳಗಾವಿ / ಅಥಣಿ / ಅಥಣಿ ಪೊಲೀಸ್ ಠಾಣೆ ಸೀಲ್ ಡೌನ್……………..

ಅಥಣಿ ಪೊಲೀಸ್ ಠಾಣೆ ಸೀಲ್ ಡೌನ್……………..

Spread the love

ಅಥಣಿ:  ಮೃತ ಕೊರೊನಾ ಸೋಂಕಿತ ವ್ಯಕ್ತಿ ಕಳೆದ ಕೆಲವು ದಿನಗಳ ಹಿಂದೆ ಅಥಣಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಎಂಬ  ಆಘಾತಕಾರಿ ಮಾಹಿತಿ ಹೊರ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಥಣಿ ಪೊಲೀಸ್ ಠಾಣೆ ಸೀಲ್ ಡೌನ್ ಮಾಡಲಾಗಿದೆ. ಐವರು ಪೊಲೀಸರಿಗೆ ಕ್ವಾರಂಟೈನ್ ಒಳಪಡಿಸಲಾಗಿದೆ.

ಸಂಕೋನಟ್ಟಿ ಮೂಲಕ  32 ವರ್ಷದ ವ್ಯಕ್ತಿ.  ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಆತನ ಟ್ರಾವೆಲ್ ಹಿಸ್ಟರಿ ಕೆದಕಿದಾಗ ಆತ ಪೊಲೀಸ್ ಠಾಣೆಗೆ ಭೇಟಿ ನೀಡಿರುವುದು ಬೆಳಕಿಗೆ ಬಂದಿದೆ. 

ಮೃತಪಟ್ಟ ಸೋಂಕಿತ ವ್ಯಕ್ತಿ ಮಡದಿ ಕಾಣೆಯಾಗಿದ್ದಾರೆ ಎಂಬ ಕಳೆದ ಜೂನ್ 25 ರಂದು ದೂರು ಕೊಡಲು ಅಥಣಿ ಪೊಲೀಸ್ ಠಾಣೆಗೆ ಭೇಟಿಕೊಟ್ಟಿದ್ದರು ಎನ್ನಲಾಗುತ್ತಿದೆ.

ಸದ್ಯ ಅಥಣಿ ಪೊಲೀಸ್ ಠಾಣೆ ಸಂಪೂರ್ಣ ಬಂದ್ ಮಾಡಲಾಗಿದೆ.  ಐವರು  ಪೋಲಿಸ ಸಿಬ್ಬಂದಿ ಕ್ವಾರೆಂಟೈನ್ ಮಾಡಲಾಗಿದೆ. ಠಾಣೆಯನ್ನು ಸ್ಯಾನಿಟೈಜರ ಮಾಡಲಾಗುವುದು, ಮೇಲಾಧಿಕಾರಿಗಳ ಮಾರ್ಗದರ್ಶನದಂತೆ ಠಾಣೆಯನ್ನು ತೆರೆಯಲಾಗುವುದು ಎಂದು ಅಥಣಿ ಸಿಪಿಐ ಶಂಕರಗೌಡ ಬಸನಗೌಡ  ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ